|ಜಗದೀಶ ಹೊಂಬಳಿಬೆಳಗಾವಿ
ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದು ಚಪ್ಪಲಿ ಸವೆಸುವ ಜಂಜಾಟ ಇನ್ನು ತಪ್ಪಲಿದೆ!
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೆ ಸೇವೆ ಕಲ್ಪಿಸುವುದಕ್ಕೆ ‘ಸ್ವಾವಲಂಬಿ’ ವೆಬ್​ಸೈಟ್ ವರದಾನವಾಗಿದೆ. ಈ ವೆಬ್​ಸೈಟ್ ಮೂಲಕವೇ ಭೂಮಿಯ ಮಾಲೀಕರು ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಏಳೇ ದಿನದಲ್ಲಿ ದಾಖಲೆಗಳು ಕೈ ಸೇರಲಿವೆ. ಈ ವೆಬ್​ಸೈಟ್ ಆರಂಭವಾದಾಗಿನಿಂದ ರಾಜ್ಯಾದ್ಯಂತ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಶೇ. 70ಕ್ಕಿಂತ ಹೆಚ್ಚು ವಿಲೇವಾರಿಯಾಗಿವೆ. ಈ ಮೊದಲು ನಾಡ ಕಚೇರಿಗೆ ಹೋಗಿ ಜಮೀನಿನ 11ಇ, ಪೋಡಿ ಸೇರಿ ಇತ್ಯಾದಿ ಕಾರ್ಯಗಳಿಗೆ ಅರ್ಜಿ ಸಲ್ಲಿಸಬೇಕಾಗಿತ್ತು. ಆ ಅರ್ಜಿಯು ನಾಡಕಚೇರಿಯಲ್ಲಿ ಪರಿಶೀಲನೆಗೊಳಪಟ್ಟು ಸರತಿಯಲ್ಲಿ ಬೀಳುತಿತ್ತು. ಸರತಿಯಿಂದ ಭೂಮಾಪಕರ ಬಳಿ ಹೋಗುತ್ತಿತ್ತು. ಭೂಮಾಪಕರು ಜಮೀನನ್ನು ಪರಿಶೀಲಿಸಿ, ನಕ್ಷೆ ಗುರುತಿಸಿ ಅಪ್​ಲೋಡ್ ಮಾಡುತ್ತಿದ್ದರು. ಅಪ್​ಲೋಡ್ ಆದ ದಾಖಲೆಯನ್ನು ತಪಾಸಕರ ಮೂಲಕ ಪರಿಶೀಲಿಸಿದ ಬಳಿಕ ಅಂತಿಮ ಅನುಮೋದನೆಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಕಳುಹಿಸಲಾಗುತ್ತಿತ್ತು. ಈ ಎಲ್ಲ ಪ್ರಕ್ರಿಯೆಗೆ ಕನಿಷ್ಠ ಒಂದೂವರೆ ತಿಂಗಳಿಂದ ಎರಡು ತಿಂಗಳು ಸಮಯ ಹಿಡಿಯುತ್ತಿತ್ತು. ಆದರೆ, ‘ಸ್ವಾವಲಂಬಿ’ ವೆಬ್​ಸೈಟ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳನ್ನು 7 ದಿನಗಳಲ್ಲಿ ವಿಲೇವಾರಿ ಮಾಡಲಾಗುತ್ತಿದೆ.
ಉದಾಹರಣೆಗೆ ಜಮೀನು ಮಾರಾಟ ಮಾಡುವುದಕ್ಕಾಗಿ ವೆಬ್​ಸೈಟ್​ಗೆ ಸಲ್ಲಿಕೆಯಾಗುವ ಆರ್​ಟಿಸಿಯಲ್ಲಿ ಇರುವ ಹಿಸ್ಸಾ ನಂಬರ್ ನಕ್ಷೆಯ ಅರ್ಜಿಯನ್ನು ಅಧಿಕಾರಿಗಳು ಪರಿಶೀಲಿಸಿ ನಾಗರಿಕ ಖಾತೆಯಲ್ಲಿ ಅಪ್​ಲೋಡ್ ಮಾಡಲಾಗುತ್ತದೆ. ಸಾರ್ವಜನಿಕರು ಸದರಿ ನಕ್ಷೆಯನ್ನು ಡೌನ್​ಲೋಡ್ ಮಾಡಿ, ಮಾರಾಟವಾಗಬೇಕಾದ ಭೂಮಿಯನ್ನು ನಿರ್ದಿಷ್ಟ ಅಳತೆ ಗುರುತಿಸಿ ಮತ್ತೆ ಅಪ್​ಲೋಡ್ ಮಾಡಬೇಕು. ತದನಂತರ ಭೂಮಾಪನ ಇಲಾಖೆ ಅದನ್ನು ಪುನಃ ಪರಿಶೀಲಿಸಿದ ಬಳಿಕ ಅನುಮೋದಿಸಿ, ದೃಢೀಕರಿಸಿ ಮತ್ತೆ ಅಪ್​ಲೋಡ್ ಮಾಡಲಾಗುತ್ತದೆ. ಇದನ್ನು ಪ್ರಿಂಟ್ ಪಡೆದು ಮಾರಾಟಕ್ಕೆ ನೋಂದಣಿ ಮಾಡಿಕೊಡಬಹುದು. ಈ ಪ್ರಕ್ರಿಯೆ ಮುಗಿದ ಬಳಿಕ ಪ್ರತ್ಯೇಕವಾಗಿ ಪಹಣಿ ದೊರೆಯಲಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ಮೋಜಣಿ-ಕಾವೇರಿಗೆ ಲಿಂಕ್:‘ಸ್ವಾವಲಂಬಿ’ ವೆಬ್​ಸೈಟ್ ಅನ್ನು ಭೂಮಾಪನ ಇಲಾಖೆಯ ‘ಮೋಜಣಿ’ ಹಾಗೂ ಉಪನೋಂದಣಿ ಇಲಾಖೆಯ ‘ಕಾವೇರಿ’ ತಂತ್ರಾಂಶಕ್ಕೆ ಲಿಂಕ್ ಮಾಡಲಾಗಿದೆ. ಹಿಸ್ಸಾ ನಕಾಶೆ, ಆರ್​ಟಿಸಿ (ಪಹಣಿ) ಹಾಗೂ ನೋಂದಾಯಿತ ಮೊಬೈಲ್ ನಂಬರ್ ಇರುವ ಆಧಾರ್ ಕಾರ್ಡ್ ತಾಳೆಯಾದರೆ ಮಾತ್ರ ಈ ವೆಬ್​ಸೈಟ್​ನಲ್ಲಿ ಅರ್ಜಿಗಳು ಸ್ವೀಕೃತವಾಗುತ್ತವೆ. ಕಡ್ಡಾಯವಾಗಿ ಜಮೀನಿನ ಆರ್​ಟಿಸಿ ನಂಬರ್ ಇದ್ದರೆ ಮಾತ್ರ ಅರ್ಜಿ ಮಾನ್ಯವಾಗುತ್ತದೆ. rdservices.karnataka.gov.in ವೆಬ್​ಸೈಟ್​ನಲ್ಲಿ ಅರ್ಜಿ ಸಲ್ಲಿಸಿ ಸೇವೆ ಪಡೆಯಬಹುದು.
ನನ್ನಂಥ ಸುಂದರಿಯನ್ನು ಅವರು ನೋಡೇ ಇಲ್ಲ, ಅದಕ್ಕೆ ಬಂಧಿಸಿದ್ದಾರೆ!; ಪೊಲೀಸರ ವಿರುದ್ಧವೇ ಆರೋಪ..

ಮದ್ವೆಯಾದ 3 ತಿಂಗಳ ಬಳಿಕ ಗೊತ್ತಾಯ್ತು ಆ ವಿಷ್ಯ!; ಭಯದಿಂದ ಆತ್ಮಹತ್ಯೆಗೆ ಯತ್ನಿಸಿದ 52 ವರ್ಷದ ವರ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + 7 =
Remember me
