ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಬಹುದಿನಗಳ ಬೇಡಿಕೆಯಾಗಿದ್ದ ಹೊಸ ಪಿಂಚಣಿ ಯೋಜನೆಗೆ (ಎನ್​ಪಿಎಸ್) ಸಚಿವ ಡಾ.ಕೆ.ಸುಧಾಕರ್ ಹಸಿರು ನಿಶಾನೆ ತೋರಿದ್ದಾರೆ. ಸರ್ಕಾರಿ ವೈದ್ಯ, ದಂತ ವೈದ್ಯಕೀಯ ಕಾಲೇಜು, ಇವುಗಳಿಗೆ ಹೊಂದಿಕೊಂಡಿರುವ ಬೋಧಕ ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಈ ಯೋಜನೆ ಲಾಭ ಪಡೆಯಲಿದ್ದಾರೆ.
ಕರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗೆ ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಎನ್​ಪಿಎಸ್ ಯೋಜನೆ ಜಾರಿಗೊಳಿಸಿರುವ ಈ ತೀರ್ಮಾನ ಸಾರ್ಥಕಭಾವ ಮೂಡಿಸಿದೆ.| ಡಾ.ಕೆ.ಸುಧಾಕರ್ವೈದ್ಯಕೀಯ ಶಿಕ್ಷಣ ಸಚಿವ
ಸಚಿವ ಡಾ.ಸುಧಾಕರ್ ಅಧಿಕಾರ ವಹಿಸಿಕೊಂಡ ಬಳಿಕ ಅವರನ್ನು ಭೇಟಿ ಮಾಡಿದ್ದ ಇಲಾಖೆಯ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಪಿಂಚಣಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಮನವಿ ಸ್ವೀಕರಿಸಿದ್ದ ಸಚಿವರು, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಬೇಡಿಕೆಗೆ ಅನುಮೋದನೆ ನೀಡುವಂತೆ ಸುಧಾಕರ್ ಅವರು ಸಿಎಂ ಯಡಿಯೂರಪ್ಪ ಭೇಟಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಅಧಿಕೃತ ಆದೇಶ ಹೊರಬಿದ್ದಿದೆ.
ಇದನ್ನೂ ಓದಿ:ಈ 5 ವರ್ಷದ ಬಾಲಕ ಅಮ್ಮನ ಜೀವ ಉಳಿಸಿದ್ದು ‘ಆಟಿಕೆ ಆ್ಯಂಬುಲೆನ್ಸ್​’ನಿಂದ; ಸಮಯಪ್ರಜ್ಞೆಗೆ ಶ್ಲಾಘನೆ
ಈ ಹಿಂದೆ ಬೋಧಕ ಸಿಬ್ಬಂದಿ ಬೇಡಿಕೆಯಾಗಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳಿಗೆ ಅನುಗುಣವಾಗಿ ವೇತನ ಮತ್ತು ಭತ್ಯೆ ನೀಡುವ ಪ್ರಸ್ತಾವನೆಗೂ ಸಚಿವರು ಅನುಮೋದನೆ ದೊರಕಿಸಿಕೊಟ್ಟಿದ್ದರು. ಹಾಗೆಯೇ 5-6 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವೈದ್ಯ ವಿದ್ಯಾರ್ಥಿಗಳ ವೇತನ ಪ್ರಸ್ತಾವನೆಗೂ ಅನುಮತಿ ದೊರಕಿಸಿ, ಈಗಾಗಲೇ ಪರಿಷ್ಕೃತ ಶಿಷ್ಯ ವೇತನ ಆದೇಶ ಜಾರಿಯಾಗಿದೆ. ಇದೀಗ ಅನೇಕ ದಿನಗಳಿಂದ ಅನುಮತಿಗೆ ಕಾಯುತ್ತಿದ್ದ ಎನ್​ಪಿಎಸ್ ಯೋಜನೆಗೂ ಮುಕ್ತಿ ದೊರಕಿದಂತಾಗಿದೆ.
ಇದನ್ನೂ ಓದಿ:ತಂದೆಯನ್ನು ಕೊಂದ ಮಗನ ಬಂಧನ, 2 ತಿಂಗಳ ಹಿಂದೆಯೇ ಸ್ಕೆಚ್ ಹಾಕಿದ್ದ ಆರೋಪಿ
5949 ಅಧಿಕಾರಿ- ಸಿಬ್ಬಂದಿಗೆ ಪ್ರಯೋಜನ :ಒಟ್ಟು 27 ಸಂಸ್ಥೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ 5,949 ಅಧಿಕಾರಿ ಮತ್ತು ಸಿಬ್ಬಂದಿಗೆ ಯೋಜನೆ ಪ್ರಯೋಜನ ದೊರೆಯಲಿದೆ. ಇದರಲ್ಲಿ 2,061 ಮಂದಿ ಎಐಸಿಟಿಇ ಅನುಮೋದನೆ ಪಡೆದ ಹುದ್ದೆಗಳಾಗಿದ್ದರೆ, 3,888 ಎಐಸಿಟಿಇಯೇತರ ಹುದ್ದೆಗಳಾಗಿವೆ. ಈ ನೂತನ ಯೋಜನೆಯಿಂದ ಸರ್ಕಾರಕ್ಕೆ ಪ್ರತಿ ವರ್ಷ 77.27 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. 2006ರ ಏ.1ರ ನಂತರ ಕಾಯಂ ಆಗಿ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗೆ ತಕ್ಷಣದಿಂದಲೇ ನೂತನ ಪಿಂಚಣಿ ಯೋಜನೆ ಜಾರಿಯಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅವಾಕ್ಸ್​ ಖರೀದಿಗೆ 147.81 ಶತಕೋಟಿ ಡಿಫೆನ್ಸ್ ಡೀಲ್?| 200 ಟ್ಯಾಕ್ಟಿಕಲ್​ ಡ್ರೋನ್​ಗಳು ಸೇರಲಿವೆ ಸೇನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 3 =
Remember me
