ಮಂಗಳೂರು:ಸಿಎಎ, ಎನ್ಆರ್​​ಸಿ ಪರ ಫೇಸ್ಬುಕ್​ನಲ್ಲಿ ಪೋಸ್ಟ್ ಮಾಡಿದ ವ್ಯಕ್ತಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ.
ಜೀವ ಬೆದರಿಕೆ ಕರೆ ಬಂದಿರುವುದು ಇಲ್ಲಿನ ಬಿಜೆಪಿ ಕಾರ್ಯಕರ್ತ ಮಹಮ್ಮದ್ ಅಸ್ಗರ್​ ಎಂಬುವವರಿಗೆ. ಮಹಮ್ಮದ್​ ಆಸ್ಗರ್​ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಂರಿಗೆ ಯಾವುದೇ ತೊಂದರೆ ಆಗಲ್ಲ ಎಂದು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು,
ಅಸ್ಗರ್​ಗೆ ವಿದೇಶದಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಲಾಗಿದೆ. ಅಲ್ಲದೆ ವಾಯ್ಸ್ ಮೆಸೇಜ್ ಮೂಲಕವೂ ಬೆದರಿಕೆ ಮಾಡಲಾಗಿದೆ. ಕರೆ ಮಾಡಿ “ದಕ್ಷಿಣಕನ್ನಡದಲ್ಲಿ ನೀನು ಜೀವಂತ ಉಳಿಯಲ್ಲ” ಎಂದು ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.
ಅಲ್ಲದೆ “ನೀನು ಈ ಬಗ್ಗೆ ಲೇಖನ ಬರೆದರೆ, ಯಾವುದಾದರೂ ಗುಡ್ಡೆಯಲ್ಲಿ ನಿನ್ನ ಶವ ಪತ್ತೆಯಾಗಬಹುದು” ಎಂದು ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಮ್ಮದ್​ ಅಸ್ಗರ್​ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು. ಕರೆ ಬಂದ ಮೂಲಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
