ಬೆಳಗಾವಿ:ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್ ಪರೀಕ್ಷೆ ಬರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟೂ ಅಕ್ರಮ ಹೊರಬರುತ್ತಿದೆ. ಅಕ್ರಮಕ್ಕೆ ಬಳಸಲು ಎಲೆಕ್ಟ್ರಾನಿಕ್ ಡಿವೈಸ್‌ಗಳನ್ನು ಮಾರ್ಪಾಡು ಮಾಡಿ, ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದ ಮೂವರನ್ನು ಬೆಳಗಾವಿ ಜಿಲ್ಲಾ ಪೊಲೀಸರು ಶುಕ್ರವಾರ ಬಂಧಿಸಿದ್ದು, ಬಂಧಿತರ ಸಂಖ್ಯೆ 19ಕ್ಕೆ ಏರಿದೆ.
ಅರಭಾಂವಿಯ ಅಕ್ಷಯ ದುಂದಪ್ಪ ಭಂಡಾರಿ (33), ಬಿರಣಗಡ್ಡಿಯ ಬಸವರಾಜ ರುದ್ರಪ್ಪ ದುಂದನಟ್ಟಿ (34) ಹಾಗೂ ರಾಜಾಪುರದ ಶ್ರೀಧರ ಲಕ್ಕಪ್ಪ ಕಟ್ಟಿಕಾರ ಬಂಧಿತರು. ಪ್ರಕರಣದ ಪ್ರಮುಖ ಆರೋಪಿ ಸಂಜು ಭಂಢಾರಿಗೆ ಅಕ್ಷಯ ಬಂಢಾರಿ ಬೆಂಗಳೂರಿನಿಂದ ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು ತಂದು ಮಾರ್ಪಾಡು ಮಾಡಿ ಕೊಟ್ಟಿದ್ದ ಎನ್ನಲಾಗಿದೆ. ಅವುಗಳನ್ನು ಸಂಜು ಭಂಡಾರಿಯಿಂದ ಪಡೆದು ಶ್ರೀಧರ ಕಟ್ಟಿಕಾರ ಅಭ್ಯರ್ಥಿಗಳಿಗೆ ವಿತರಣೆ ಮಾಡಿರುವುದು ಬೆಳಕಿಗೆ ಬಂದಿದೆ. ಇನ್ನು ಬಸವರಾಜ ದುಂದನಟ್ಟಿಯು ಶಿರಹಟ್ಟಿಯಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆಗಳಿಗೆ ಉತ್ತರ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಮೂರು ಮೊಬೈಲ್​ಫೋನ್​, ಒಂದು ದ್ವಿಚಕ್ರವಾಹನ ಹಾಗೂ 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು 18 ಮಾಡಿಫೈ ಮಾಡಿರುವ ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೆಜಿಎಫ್​-2 ಚಿತ್ರದ ಪ್ರೇರಣೆ; 72 ಗಂಟೆಗಳಲ್ಲಿ 3 ಸೆಕ್ಯುರಿಟಿ ಗಾರ್ಡ್​ಗಳ ಕೊಲೆ: ನಿದ್ರೆಗೆಟ್ಟ ಕೈದಿಗಳು..
ರೆಸಾರ್ಟ್​ನಲ್ಲಿ ‘ದೊಡ್ಡವರ’ ಮಕ್ಕಳ ರೇವ್ ಪಾರ್ಟಿ; ಹೊರಗಿನ ಯುವತಿಯರನ್ನು ಕರೆಸಿಕೊಂಡು ಮೋಜು-ಮಸ್ತಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 15 =
Remember me
