ದಾವಣಗೆರೆ:ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ ವಾಪಸಾಗುತ್ತಿದ್ದ ವೇಳೆ ಆಂಬುಲೆನ್ಸ್​ ಕ್ಯಾಂಟರ್​​ಗೆ​ ಡಿಕ್ಕಿ ಹೊಡೆದ ಪರಿಣಾಮ ನರ್ಸ್​ ಒಬ್ಬರು ಮೃತಪಟ್ಟಿರುವ ಘಟನೆ ದಾವಣೆಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನಲ್ಲಿ ನಡೆದಿದೆ.
ಮೃತರನ್ನು ಜಮಖಂಡಿ ಮೂಲದ ವಿಶ್ವನಾಥ್​ ಮನಗೂಳಿ(30) ಎಂದು ಗುರುತಿಸಲಾಗಿದ್ದು, ಶಿವಮೊಗ್ಗದಲ್ಲಿರುವ ಆಸ್ಪತ್ರೆಗೆ ರೋಗಿಯನ್ನು ದಾಖಲಿಸಿ ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಜಮಖಂಡಿ ಮೂಲದ ವಿಶ್ವನಾಥ್​ ಮನಗೂಳಿ ಕಳೆದ ಮೂರುವರೆ ವರ್ಷಗಳಿಂದ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಫ್​ ನರ್ಸ್​ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರೋಗಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕಾರಣ ಅವರನ್ನು ಶಿವಮೊಗ್ಗದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ಆಂಬುಲೆನ್ಸ್​ನಲ್ಲಿ ವಾಪಸ್​ ಆಗುತ್ತಿದ್ದರು.
ಇದನ್ನೂ ಓದಿ:ಸಹೋದ್ಯೋಗಿಗಳ ಅಮಾನತು ಖಂಡಿಸಿ ವಿಭಿನ್ನವಾಗಿ ಪ್ರತಿಭಟಿಸಿದ ಎಎಪಿ ಸಂಸದ
ರೋಗಿಯನ್ನು ಬಿಟ್ಟು ವಾಪಸ್​ ಆಗುವ ವೇಳೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಸವಳಂಗ-ಶಿಕಾರಿಪುರ ರಸ್ತೆಯ ಹೊಸಜೋಗ ಬಸ್ ನಿಲ್ದಾಣದ ಬಳಿ ಕ್ಯಾಂಟರ್​ಗೆ ಆಂಬುಲೆನ್ಸ್​​ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನರ್ಸ್​ ವಿಶ್ವನಾಥ್​ರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ​ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಕ್ಯಾಂಟರ್​ ಹಾಗೂ ಅಂಬುಲೆನ್ಸ್​ ಚಾಲಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಮತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 4 =
Remember me
