ಶಿವಮೊಗ್ಗ:ತುಂಬು ಗರ್ಭಿಣಿ ಅವಧಿಯಲ್ಲೂ ರಜೆ ಪಡೆಯದೆ ಸೇವೆ ಸಲ್ಲಿಸುತ್ತಿರುವ ನರ್ಸ್ ರೂಪ​ ಅವರನ್ನು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಫೋನ್​ ಕರೆ ಮಾಡಿ ಅಭಿನಂದಿಸಿದ್ದಾರೆ.
ಅಲ್ಲದೆ ಇಂದಿನಿಂದ ರಜೆ ಪಡೆದು ವಿಶ್ರಾಂತಿಗೆ ತೆರಳುವಂತೆ ಕೂಡ ಸೂಚಿಸಿದ್ದಾರೆ.
ಇದನ್ನೂ ಓದಿಪರ ರಾಜ್ಯಗಳಿಂದ ಹೊತ್ತು ತಂದರು ವೈರಸ್​: ಗ್ರೀನ್​ ಝೋನ್​ ಶಿವಮೊಗ್ಗದಲ್ಲಿ ಕರೊನಾ ಶಿಕಾರಿ!
ತೀರ್ಥಹಳ್ಳಿಯ ಶ್ರೀಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ರೂಪ ಗುತ್ತಿಗೆ ಆಧಾರದಲ್ಲಿ ನರ್ಸ್​ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಕರೊನಾ ವೈರಸ್​ ಹಾವಳಿ ಹಿನ್ನೆಲೆಯಲ್ಲಿ ಅವರು ಗರ್ಭಿಣಿಯಾಗಿದ್ದರೂ ರಜೆ ಪಡೆಯದೆ ಸೇವೆ ಸಲ್ಲಿಸುತ್ತಿದ್ದಾರೆ. ನಿತ್ಯ ಗಾಜನೂರು ಗ್ರಾಮದಿಂದ 60 ಕಿ.ಮೀ. ಇರುವ ತೀರ್ಥಹಳ್ಳಿಗೆ ಬಸ್​ನಲ್ಲಿ ಬಂದು ಸೇವೆ ಸಲ್ಲಿಸುತ್ತಿದ್ದಾರೆ.
ರೂಪ ಅವರ ಈ ಸೇವೆಯನ್ನು ಗಮನಿಸಿದ ಸಿಎಂ ಯಡಿಯೂರಪ್ಪ ಅವರು ಖುದ್ದು ಕರೆ ಮಾಡಿ ಇಂದಿನಿಂದ ರಜೆಯುವಂತೆ ಸೂಚಿಸಿದರು. ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿದ್ದರೂ ಎಲ್ಲ ರೀತಿಯ ಸೌಲಭ್ಯ ಒದಗಿಸುವುದಾಗಿ ಅವರು ತಿಳಿಸಿದ್ದಾರೆ.
ಭಾರತ-ಚೀನಾ ಗಡಿಯಲ್ಲಿ ಸೈನಿಕರ ಹೊಡೆದಾಟ…ಕಲ್ಲು ತೂರಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 4 =
Remember me
