ಬೆಳ್ತಂಗಡಿ:ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಸುಮಾ(19) ಮೃತ ವಿದ್ಯಾರ್ಥಿನಿ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಯಾಗಿದ್ದಾರೆ. ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ ಈಕೆ ಲೋ ಬಿಪಿಯಿಂದ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಆಗಸ್ಟ್ 9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಮಾತ್ರೆಗಳನ್ನು ಪಡೆದು ಮನೆಗೆ ತೆರಳಿದ್ದಳು. ನಂತರ ಆಗಸ್ಟ್ 11 ರಂದು ಮತ್ತೆ ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು ಗುಣಮುಖವಾಗಿರುವ ಕಾರಣ ಬಳ್ಳಮಂಜದಲ್ಲಿರುವ ತನ್ನ ಅಕ್ಕನ ಮನೆಗೆ ತೆರಳಿದ್ದಳು. ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿ(Low BP)ಉಂಟಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಲಿಫ್ಟ್ ಕೇಳಿಕೊಂಡೇ 14 ದೇಶ, 20 ಸಾವಿರ ಕಿ.ಮೀ ಪ್ರಯಾಣಿಸಿದ ವಿದೇಶಿ ಪ್ರವಾಸಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − six =
Remember me
