ತುಮಕೂರು:ರಾಜ್ಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಮತ್ತೊಂದು ಆತ್ಮಹತ್ಯೆಯ ಪ್ರಕರಣ ಬೆಳಕಿಗೆ ಬಂದಿದೆ. ಅಂದಹಾಗೆ ಇದು ಪಿಯುಸಿ ಫಲಿತಾಂಶಕ್ಕೆ ಸಂಬಂಧಿತ ಆತ್ಮಹತ್ಯೆ ಪ್ರಕರಣವಲ್ಲ.
ಪಿಯುಸಿ ಫಲಿತಾಂಶದ ಕಾರಣಕ್ಕೆ ರಾಜ್ಯದಲ್ಲಿ ಇಂದು ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮೊರೆಹೋದ ಪ್ರಕರಣಗಳು ವರದಿಯಾಗಿವೆ. ಅದಲ್ಲದೆಯೂ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚೆಗೆ ಮೇಲಿಂದ ಮೇಲೆ ಕೇಳಿ ಬರುತ್ತಿದ್ದು, ಈಗ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಜೀವ ಕಳೆದುಕೊಂಡಿದ್ದಾಳೆ.
ತುಮಕೂರಿನ ಶ್ರೀದೇವಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ನಂದಿನಿ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ತುಮಕೂರು ಜಿಲ್ಲೆಯ ಪಾವಗಡ ಮೂಲದ ನಂದಿನಿ, ನೇಣು ಹಾಕಿಕೊಂಡು ಸಾವಿಗೀಡಾಗಿದ್ದಾಳೆ. ಆತ್ಮಹತ್ಯೆಗೆ ಕಾರಣವೇನು ಎಂಬ ಕುರಿತು ಖಚಿತ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ. ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಮೊಬೈಲ್‌ ಗೀಳಿನಿಂದಾಗಿ ಫ್ರೆಂಡ್ಸೇ ಇಲ್ಲ… ಇನ್ಯಾಕೆ ಈ ಜೀವನ? ಡೆತ್‌ನೋಟ್‌ ಬರೆದಿಟ್ಟು ಬಾಲಕಿ ಆತ್ಮಹತ್ಯೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 13 =
Remember me
