ಹಾವೇರಿ:ರಾಜ್ಯ ರಸ್ತೆ ಸಾರಿಗೆ ನೀಗಮದ ವ್ಯಾಪ್ತಿಗೆ ಬರುವ NWKRTC ಬಸ್​ ಚಾಲಕರೊಬ್ಬರು ಛತ್ರಿ ಹಿಡಿದು ವಾಹನ ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಇತ್ತ ವಿಡಿಯೋ ವೈರಲ್​ ಆದ ಬಳಿಕ ಹಲವರು ರಾಜ್ಯ ಸರ್ಕಾರದ ಹಾಗೂ ಸಾರಿಗೆ ಸಂಸ್ಥೆಯ ವಿರುದ್ಧ ಕಿಡಿಕಾರಿದ್ದರು. ಇದೀಗ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಸಂಸ್ಥೆ ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಎಂದು ಹೇಳಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ NWKRTC, ದಿನಾಂಕ: 23-05-2024 ರಂದು ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25 ಎಫ್-1336 ಬೆಟಗೇರಿ-ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕರಾಗಿ ಶ್ರೀ ಹನುಮಂತಪ್ಪ ಅ ಕಿಲ್ಲೇದಾರ, ಬಿ.ಸಂ-1203 D ಹಾಗೂ ನಿರ್ವಾಹಕರಾಗಿ ಶ್ರೀಮತಿ ಅನಿತಾ ಎಚ್. ಬಿ ಸಂ-396 ರವರು ಕರ್ತವ್ಯ ನಿರ್ವಹಿಸುತ್ತಿದ್ದರು.
ಸನ್ಮಾನ್ಯ @RLRBTM ಅವರೇ, ಇದು ನಮ್ಮ ಸರ್ಕಾರಿ ಬಸ್ಸುಗಳ ದುಃಸ್ಥಿತಿ. ಈ ರೀತಿ ಒಂದು ಕೈಯಲ್ಲಿ ಕೊಡೆ, ಒಂದು ಕಯ್ಯಲ್ಲಿ ಸ್ಟಿಯರಿಂಗ್ ವೀಲ್ ಬ್ಯಾಲೆನ್ಸ್ ಮಾಡುತ್ತ ಓಡಿಸುವುದರಿಂದ ಚಾಲಕರು ಹಾಗೂ ಪ್ರಯಾಣಿಕರ ಜೀವಕ್ಕೆ ಕುತ್ತು. ಇದೇನಾ ಚಾಲಕರಿಗೆ ಇರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ ? (standard operating procedure). ಚಾಲಕರ,…pic.twitter.com/zcG43pdWvf
ಇದನ್ನೂ ಓದಿ:ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಅವಧಿ ಮೀರಿದ ಆಹಾರ ಪದಾರ್ಥ, ನಿಯಮ ಉಲ್ಲಂಘನೆ ಪತ್ತೆ
ಮಳೆ ಬರುತ್ತಿದ್ದ ಆ ಸಮಯದಲ್ಲಿ ಅಂದರೆ ಸುಮಾರು 04:30 ಕ್ಕೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಇದ್ದುದರಿಂದ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು, ಹಿಡಿದುಕೊಂಡು ವಾಹನ ಚಾಲನೆ ಮಾಡಿರುತ್ತಾರೆ. ಇದನ್ನು ಸದರಿ ನಿರ್ವಾಹಕಿಯು ವಿಡಿಯೋ ಚಿತ್ರೀಕರಣ ಮಾಡಿರುತ್ತಾರೆ. ಆ ಸಮಯದಲ್ಲಿ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಾಗಲಿ ಸೋರಿಕೆ (Roof Leakage) ಇರಲಿಲ್ಲ ಎಂದು ತಿಳಿದುಬಂದಿರುತ್ತದೆ.
ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲು ಆಗಿರುವುದಿಲ್ಲ. ಸದರಿ ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿ ಮೇಲ್ಚಾವಣಿಯು ಸೋರದೆ ಇರುವುದನ್ನು ಖಚಿತಪಡಿಸಿಕೊಳ್ಳಲಾಗಿದೆ. ಈ ಕುರಿತು ಸದರಿ ಚಾಲನಾ ಸಿಬ್ಬಂದಿಗಳಿಂದ ಸ್ಪಷ್ಟೀಕರಣ ಪಡೆಯಲಾಗಿ ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಚಿತ್ರೀಕರಣವಾಗಿರುತ್ತದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
