ದಾವಣಗೆರೆ:ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರನ್ನು ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡಿರುವ ಗ್ರಾಮಸ್ಥರು, ಕೊನೆಗೆ ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆ ಮೂಲಕ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಮತಾಂತರ ಪ್ರಯತ್ನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ ಎನ್ನಲಾಗಿದೆ.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹಿಂಡಸಘಟ್ಟ ಗ್ರಾಮದ ಮಟ್ಟಿ ಕ್ಯಾಂಪ್​ನಲ್ಲಿ ಮತಾಂತರಕ್ಕೆ ಪ್ರಯತ್ನ ಮಾಡುತ್ತಿದ್ದ ಇಬ್ಬರು ಪಾಸ್ಟರ್​ಗಳನ್ನು ಗ್ರಾಮದ ಮುಖಂಡರು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಟ್ಟಿ ಕ್ಯಾಂಪ್​ನ ಮನೆಯೊಂದರಲ್ಲಿ ಯಜಮಾಣ ಅನಾರೋಗ್ಯದಿಂದ ನರಳುತ್ತಿದ್ದಾಗ ಏಸುವಿನ ಪ್ರಾರ್ಥನೆ ಮಾಡಿದರೆ ಗುಣವಾಗುತ್ತದೆ ಎಂದು ಈ ಪಾಸ್ಟರ್​ಗಳು ನಂಬಿಸಿದ್ದರು. ಮಾತ್ರವಲ್ಲ ಮಟ್ಟಿ ಕ್ಯಾಂಪ್​ನ ಜನರ ಹಿಂದೆ ಹಲವು ದಿನಗಳಿಂದ ಬಿದ್ದಿರುವ ಇವರು ಮತಾಂತರಕ್ಕೆ ನಿರಂತರ ಪ್ರಯತ್ನ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಗ್ರಾಮದ ಮುಖಂಡರು ಅವರ ಪ್ರಯತ್ನಕ್ಕೆ ಆಕ್ಷೇಪಿಸಿ, ಮಲೆಬೆನ್ನೂರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಹಿಳಾ ದಿನಾಚರಣೆಯಂದೇ ನಡೆಯಿತು ದುರಂತ!; ಹೆಣ್ಣು ಮಗುವನ್ನೂ ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಡ್ರಗ್ಸ್​ ಮಾಫಿಯಾ ಸದ್ದು; ನಿರ್ಮಾಪಕರೊಬ್ಬರ ಕಚೇರಿ ಮೇಲೆ ಪೊಲೀಸರ ದಾಳಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × three =
Remember me
