ಬೆಂಗಳೂರು: ರಾಜ್ಯ ಸರ್ಕಾರವು ಹೊಸದಾಗಿ ರಚಿಸಿದ ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಿಇಒ ಆಗಿ ನಿವೃತ್ತ ಅಧಿಕಾರಿ ಕೆ.ಎಸ್.ಕೃಷ್ಣ ರೆಡ್ಡಿ ಅವರನ್ನು ನೇಮಕ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ.ಈ ನೇಮಕ ರದ್ದುಪಡಿಸಬೇಕೆಂದು ಆಗ್ರಹಿಸಿರುವ ಸಾಮಾಜಿಕ ಹೋರಾಟಗಾರ ಮರಿಲಿಂಗ ಗೌಡ ಮಾಲಿ ಪಾಟೀಲ್, ಅದಕ್ಕೆ ಕೆಲವು ಕಾರಣಗಳನ್ನೂ ನೀಡಿದ್ದಾರೆ.ಕೃಷ್ಣ ರೆಡ್ಡಿಯವರು ಲೋಕೋಪಯೋಗಿ ಇಲಾಖೆಯಲ್ಲಿದ್ದಾಗ ಕೆಟಿಟಿಪಿ ಕಾಯ್ದೆ ಉಲ್ಲಂಘನೆ ಮಾಡಿ 4ಜಿ ನಿಯಮದಡಿ ಕಾರ್ಯಲೋಪ ಎಸಗಿದ ಉದಾಹರಣೆ ಇದೆ. ಜತೆಗೆ ಈಗಾಗಲೇ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತವು ಲೋಕೋಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಐಎಎಸ್ ಅಧಿಕಾರಿಗಳು ಈ ನಿಗಮದಲ್ಲಿದ್ದಾರೆ. ಜತೆಗೆ ಮುಖ್ಯ ಇಂಜಿನಿಯರ್, ಸೂಪರಿಂಟೆಂಡೆಂಟ್ ಇಂಜಿನಿಯರ್, ಹಲವು ಕಾರ್ಯಪಾಲಕ ಇಂಜಿನಿಯರ್‌ಗಳಿದ್ದಾರೆ. ಇವರೆಲ್ಲರೂ ಸರ್ಕಾರದ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಇವರೆಲ್ಲ ರಸ್ತೆಯ ಕುರಿತ ಕಾರ್ಯಭಾರ ಮಾಡುತ್ತಿರುವಾಗ ಮತ್ತೊಂದು ಪ್ರಾಧಿಕಾರ ರಚನೆ ಮತ್ತು ಸಿಇಒ ನೇಮಕದ ಔಚಿತ್ಯವೇನು ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.ನೇಮಕ ಮಾಡುವಾಗಲೂ ಯಾವುದೇ ಅಧಿಸೂಚನೆ ಹೊರಡಿಸದೇ ಏಕಾಏಕಿ ಆದೇಶ ಹೊರಡಿಸಲಾಗಿದೆ. ಇದು ಸಾರ್ವಜನಿಕ ಹಿತದೃಷ್ಟಿಯಿಂದ ಆದ ನೇಮಕವಲ್ಲ ಎಂದೂ ಸಹ ವಾದಿಸಿದ್ದಾರೆ.ನಿವೃತ್ತಿ ಹೊಂದಿದ ಅಧಿಕಾರಿಗೆ ಪಿಂಚಣಿ ಬರಲಿದೆ. ಇದರೊಟ್ಟಿಗೆ ತೆರಿಗೆದಾರರ ಹಣದಲ್ಲಿ ಸಂಬಳ ನೀಡಿ, ಭತ್ಯೆ, ಕಚೇರಿ, ವಾಹನ, ಭತ್ಯೆ, ನೌಕರರನ್ನು ನೇಮಿಸುವುದು ಸಾರ್ವಜನಿಕರ ಹಣದ ದುರುಪಯೋಗ. ಹೀಗಾಗಿ ಈ ನೇಮಕವನ್ನು ರದ್ದುಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × two =
Remember me
