ಚಿಕ್ಕಬಳ್ಳಾಪುರ:ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲು ಅಡ್ಡಿಪಡಿಸಿದ್ದಕ್ಕೆ ಜಿಲ್ಲಾಡಳಿತ ಭವನಕ್ಕೇ ಶವವನ್ನು ತೆಗೆದುಕೊಂಡ ಬಂದ ಪ್ರಕರಣವೊಂದು ವರದಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಚಿಂತಾಮಣಿ ತಾಲೂಕು ರಂಗೇನಹಳ್ಳಿ ಗ್ರಾಮದ ವೆಂಕಟಮ್ಮ (80) ಎಂಬವರು ವಯೋಸಹಜ ಸಮಸ್ಯೆಯಿಂದ ಮೃತಪಟ್ಟಿದ್ದರು. ಇವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ಕುಟುಂಬಸ್ಥರು ಸ್ಮಶಾನದಲ್ಲಿ ನಡೆಸಲು ಮುಂದಾಗಿದ್ದರು.
ಆದರೆ ಗ್ರಾಮದ ನಿವಾಸಿ, ನಿವೃತ್ತ ಸಮಾಜ‌ಕಲ್ಯಾಣ ಇಲಾಖಾಧಿಕಾರಿ‌ ನಾರಾಯಣಸ್ವಾಮಿ ಎಂಬವರು ಅದಕ್ಕೆ ಅಡ್ಡಿಪಡಿಸಿದ್ದರು. ಮಾತ್ರವಲ್ಲ, ಸ್ಮಶಾನ ತನ್ನ ಸ್ವಂತ ಜಮೀನು ಎಂದು ತಗಾದೆ ತೆಗೆದ ಅವರು ಅಲ್ಲಿ ಅಂತ್ಯಸಂಸ್ಕಾರ ನಡೆಸದಂತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಇದರಿಂದ ರೋಸಿಹೋದ ಕುಟುಂಬಸ್ಥರು ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನಕ್ಕೆ ತೆಗೆದುಕೊಂಡು ಬಂದಿದ್ದಾರೆ. ಜಿಲ್ಲಾಡಳಿತ ಭವನದ ಎದುರು ಶವವಿಟ್ಟು ಆಕ್ರೋಶ ವ್ಯಕ್ತಪಡಿಸಲಾಗುತ್ತಿದ್ದು, ಸಂಬಂಧಿಕರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.
ಮತ್ತೆ ಬಣ್ಣ ಹಚ್ಚಿದ್ರು ನಟಿ ನೀತೂ ಶೆಟ್ಟಿ; ಈಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಕುಂಜೆ..

ಸಪ್ತ ಸುರಂಗದಾಚೆ ಎಲ್ಲೋ ಅಂತರ್ಜಲವು ಕಾದಿದೆ; ಅಭಿನವ ಭಗೀರಥಗೀಗ ಪದ್ಮಗೌರವವು ಸಂದಿದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
