ಬೆಂಗಳೂರು:ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಾಕಾರಿ ಬರಹ ಹಾಕಿದ್ದ ಇಬ್ಬರ ವಿರುದ್ಧ ಕಬ್ಬನ್​ಪಾರ್ಕ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕರೊನಾ ಸೋಂಕು ತಗುಲಿದ್ದರಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅವರ ಫೋಟೋವನ್ನು ಫೇಸ್​ಬುಕ್​ನಲ್ಲಿ ಶೇರ್​ ಮಾಡಿದ ಕಿಡಿಗೇಡಿಗಳಿಬ್ಬರು ಸಿದ್ದರಾಮಯ್ಯಗೆ ನಿಂದಿಸಿದ್ದಾರೆ. ಅಲ್ಲದೆ ‘RIP’ ಎಂದೂ ಕಮೆಂಟ್ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ.
ಇದನ್ನೂ ಓದಿರಿಸಿಎಂ ಯಡಿಯೂರಪ್ಪಗೆ ವರ್ಕ್​ ಫ್ರಮ್ ಹಾಸ್ಪಿಟಲ್
ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ಮಂಜು ಮತ್ತು ಆನಂದ್ ಕುಮಾರ್ ಎಂಬುವವರ ವಿರುದ್ಧ ಕಾಂಗ್ರೆಸ್ ಲೀಗಲ್ ಟೀಂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿದೆ.
ಎರಡು ದಿನಗಳ ಹಿಂದಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೂ ಕರೊನಾ ಸೋಂಕು ದೃಢಪಟ್ಟಿತ್ತು. ಈ ಸಂಬಂಧ ಅಮಿತ್ ಷಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ ಹಾಕಿದ್ದ ಆರೋಪದಡಿ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದರು.
ಅಮಿತ್ ಷಾ ವಿರುದ್ಧ ಆಕ್ಷೇಪಾರ್ಹ ಬರಹ: ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 16 =
Remember me
