ಬೆಂಗಳೂರು:ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರ ಬೆಂಗಳೂರಿನ ಮನೆಗೆ ಕಿಡಿಗೇಡಿಗಳ ಗುಂಪೊಂದು ನಿಂದನಾತ್ಮಕ ಪೋಸ್ಟರ್‌ಗಳನ್ನು ಅಂಟಿಸಿ ಪರಾರಿಯಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಮಧ್ಯರಾತ್ರಿ ಸ್ಥಳಕ್ಕೆ ಆಗಮಿಸಿ ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ.
ಪೋಸ್ಟರ್ ನಲ್ಲಿ ಏಕವಚನದಲ್ಲಿ ನಿಂದನೆ ಜತೆಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಇದೇ ನಿನ್ನ ಸಂಸ್ಕೃತಿ ಎಂದು ಬರೆದು ಕೆಲವು ಫೋಟೋಗಳನ್ನು ಬಳಕೆ ಮಾಡಲಾಗಿದೆ. ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಅಂಟಿಸಿದ್ದ ಪೋಸ್ಟರ್ ತೆರವುಮಾಡಿದ್ದಾರೆ.
ಪೋಸ್ಟರ್‌ಗಳನ್ನು ಅಂಟಿಸಿದವರು ಯಾರು ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಅವರು ಕಾಂಗ್ರೆಸ್ ಕಾರ್ಯಕರ್ತರು ಅಥವಾ ಡಿಕೆ ಶಿವಕುಮಾರ್ ಬೆಂಬಲಿಗರಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಪ್ರಕಾಶ್ ಭೇಟಿ ನೀಡಿ ರಮೇಶ್ ಜಾರಕಿಹೊಳಿ ನಿವಾಸದಲ್ಲಿರುವ ಸಿಬ್ಬಂದಿಯನ್ನು ವಿಚಾರಿಸಿದರು. ಘಟನೆ ಕುರಿತು ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ಸೋಮವಾರ ಡಿಸಿಎಂ ಡಿಕೆಶಿ ವಿರುದ್ಧ ರಮೇಶ್ ಜಾರಕಿಜೊಳಿ ಸುದ್ದಿಗೋಷ್ಠಿ ನಡೆಸಿ ಡಿಕೆ ಹೆದರು ಪುಕ್ಕಲ, ಮೋಸಗಾರ ಎಂದು ಜರೆದಿದ್ದರು. ರಾಜ್ಯ ಸರ್ಕಾರದ ಪತನಕ್ಕೆ ಬಿಜೆಪಿ ಸ್ಕೆಚ್ ಹಾಕಿಲ್ಲ. ಆಪರೇಷನ್ ಕಮಲವನ್ನು ನಾವು ಮಾಡ್ತಿಲ್ಲ. ಸುಳ್ಳು ಗ್ಯಾರಂಟಿ ಕೊಟ್ಟಿದ್ದನ್ನ ಈಡೇರಿಸಲು ಆಗದ ಕಾರಣ ಆಪರೇಷನ್ ಕಮಲ ಮಾಡುತ್ತಿದ್ದಾರೆ ಅಂತಾ ಡಿಕೆ ಗ್ಯಾಂಗ್ ಹೇಳ್ತಿದೆ ಎಂದು ಪ್ರತ್ಯಾರೋಪ ಮಾಡಿದ್ದರು. 2019ರಲ್ಲಿ ಅನಿವಾರ್ಯ ಇತ್ತು ಆಪರೇಷನ್ ಮಾಡಿದ್ವಿ. ಅಂದು ಡಿಕೆಶಿಯ ಸರ್ವಾಧಿಕಾರಿ ಧೋರಣೆ ಮತ್ತು ಸೊಕ್ಕಿನಿಂದ ಸರ್ಕಾರವನ್ನು ಬೀಳಿಸಬೇಕಾಯಿತು ಅಂದಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − six =
Remember me
