ಬೆಂಗಳೂರು:ಪ್ರತಿಪಕ್ಷ ಬಿಜೆಪಿ ರಾಜ್ಯದ ಬರ ಅಧ್ಯಯನ ಪ್ರವಾಸ ಕೈಗೊಂಡ ಬೆನ್ನಲ್ಲೇ ಉಸ್ತುವಾರಿ ಸಚಿವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಯಾ ಜಿಲ್ಲೆಗೆ ತೆರಳಲು ಅಪ್ಪಣೆ ನೀಡಿದ್ದಾರೆ. ಬಿಜೆಪಿ ಬರ ಅಧ್ಯಯನ ಪ್ರವಾಸ ಆರಂಭ, ಜೆಡಿಎಸ್ ಕೂಡ ಸಂಕಷ್ಟಕ್ಕೆ ಬಳಿಗೆ ನಿರ್ಧರಿಸ ಬೆನ್ನಲ್ಲೇ ಸಿಎಂ ಈ ಸೂಚನೆ ನೀಡಿರುವುದು ಗಮನಾರ್ಹ.
ಮುಂದಿನ ಎರಡು ವಾರಗಳ ಕಾಲ ಆಯಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಬೇಕು. ಪರಿಸ್ಥಿತಿ ಅವಲೋಕಿಸಿ ವಸ್ತುಸ್ಥಿತಿ ಹಾಗೂ ಕೈಗೊಳ್ಳಲಾದ ಬರ ನಿರ್ವಹಣೆ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿ, ನ.15ರೊಳಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ.
ರಾಜ್ಯದ 236 ತಾಲೂಕುಗಳ ಪೈಕಿ ಈವರೆಗೆ 216 ತಾಲೂಕುಗಳನ್ನು ಬರಪೀಡಿತವೆಂದು ೋಷಿಸಲಾಗಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು, ಕೃಷಿ-ಕೈಗಾರಿಕೆಗಳಿಗೆ ನೀರು, ಬೆಳೆ ಹಾನಿ, ಜನರ ಉದ್ಯೋಗದ ಸ್ಥಿತಿ, ಬರ ಪರಿಹಾರ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.
ಬರ ನಿರ್ವಹಣೆ ಕಾರ್ಯಕ್ರಮಗಳ ಕುರಿತು ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅದಿಕಾರಿಗಳಿಗೂ ಹಲವು ಬಾರಿ ನಿರ್ದೇಶನ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯ ತಾಲೂಕುಗಳಿಗೆ ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಬೇಕು.
ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆ ಹಾನಿ ಮುಂತಾದವುಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಸ್ಥಳೀಯ ಶಾಸಕರೊಂದಿಗೆ ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರು, ಉದ್ಯೋಗ ಸೃಷ್ಟಿ ಮತ್ತಿತರ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿ, ಅಗತ್ಯವಿರುವ ಕಡೆ ಖುದ್ದು ಭೇಟಿ ನೀಡಿ ಪರಾಮರ್ಶಿಸಬೇಕು ಎಂದು ಸಲಹೆ ನೀಡಿದ್ದಾರೆ.
ಪರಿಹಾರ ಕಾಮಗಾರಿಗಳ ಪರಿಣಾಮಕಾರಿ ಅನುಷ್ಠಾನ ಗಮನಿಸಿ, ಯಾವುದೇ ವೈಲ್ಯಗಳಾಗದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಹಣ ಬಿಡುಗಡೆಗೆ ಕಾಯದೆ ಬಿಜೆಪಿ ಅಡಳಿತಾವಧಿಯಲ್ಲಿ ನೆರೆ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ಕೈಗೊಂಡು, ನಂತರ ಈ ವೆಚ್ಚವನ್ನು ತುಂಬಿಕೊಳ್ಳಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ನಾಲ್ಕು ಗ್ಯಾರಂಟಿಗಳಿಗೆ ಹಣ ಹೊಂದಿಸಿಕೊಳ್ಳಲು ಪರದಾಡುತ್ತಿದ್ದು, ಕೇಂದ್ರದೆಡೆ ಬೆರಳು ತೋರಿಸಿ ಕಾಲ ಕಳೆಯುತ್ತಿದೆ ಎಂದು ಟೀಕಿಸಿತ್ತು.
ಸಿಎಂ ಸೇರಿ ಯಾವೊಬ್ಬ ಸಚಿವರು ಬರ ಪೀಡಿತ ಪ್ರದೇಶಕ್ಕೆ ಭೇಟಿ ನೀಡುತ್ತಿಲ್ಲ. ರೈತರು, ಜನರ ಬವಣೆ ಗಮನಿಸುತ್ತಿಲ್ಲವೆಂದು ವಾಗ್ದಾಳಿ ನಡೆಸಿ, ಬರ ಅಧ್ಯಯನ ಪ್ರವಾಸ ಕೈಗೊಳ್ಳುವುದಾಗಿ ಬಿಜೆಪಿ ಸಾರಿತ್ತು.
ಜೆಡಿಎಸ್ ಕೂಡ ಬರ ಅಧ್ಯಯನಕ್ಕಾಗಿ ರಾಜ್ಯ ಪ್ರವಾಸದ ನಿರ್ಧಾರ ಮಾಡಿದ ಬೆನ್ನಲ್ಲೇ ಪರಿಣಾಮದ ತೀವ್ರತೆಯನ್ನು ಅರಿತ ಸಿಎಂ ಸಿದ್ದರಾಮಯ್ಯ, ಉಸ್ತುವಾರಿ ಸಚಿವರಿಗೆ ಆಯಾ ಜಿಲ್ಲೆ ನೆನಪಿಸಿದ್ದಾರೆ. ‘ಫ್ಲೈಯಿಂಗ್ ವಿಸಿಟ್’ ಆಗಬಾರದೆಂದು ಎರಡು ವಾರ ಜಿಲ್ಲೆಯಲ್ಲೇ ಇದ್ದು, ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವ ಜವಾಬ್ದಾರಿಯನ್ನು ಉಸ್ತುವಾರಿ ಸಚಿವರ ಹೆಗಲಿಗೆ ಹೊರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 18 =
Remember me
