ಬೆಂಗಳೂರು:ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್‌ ಪೂಂಜಾ, ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ:ಶಿರಾಡಿ ಘಾಟ್ ನಲ್ಲಿ ಮತ್ತೆ ಭಾರೀ ಭೂಕುಸಿತ; ಸಂಚಾರ ಬಂದ್, ಕೆಸರಿನಲ್ಲಿ ವಾಹನಗಳು ಸಿಲುಕಿರುವ ಶಂಕೆ
ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಪ್ರತಾಪ್‌ ಸಿಂಹ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು.ಠಾಣೆ ಮುಂದೆ ಗುಂಪುಗೂಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪುನೀತ್‌ ಕೆರೆಹಳ್ಳಿ A1, ಪ್ರತಾಪ್‌ ಸಿಂಹ A2, ಹರೀಶ್ ಪೂಂಜಾ A3 ಆರೋಪಿಗಳು ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.
ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್‌ ಸಿಂಹ, ಶಾಸಕ ಹರೀಶ್‌ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬಸವೇಶ್ವರ ನಗರ ಪೊಲೀಸ್‌ ಠಾಣೆ ಮುಂದೆ ಇಂದು ಪ್ರತಿಭಟನೆ ನಡೆಸಿದರು.ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್‌ ಕೆರೆಹಳ್ಳಿಗೆ ಲಾಕಪ್‌ನಲ್ಲಿ ಬಟ್ಟೆ ಬಿಚ್ಚಿಸಿ ಪೊಲೀಸರು ಹಿಂಸೆ ನೀಡಿದ್ದಾರೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ವೇಳೆ ಒತ್ತಾಯಿಸಿದ್ದರು.
ಈ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಕುಮಾರ್​ ಅವರಿಂದ ಹಲ್ಲೆ ಕೇಸ್ ದಾಖಲಿಸಿದ್ದೇವೆ. ಪೊಲೀಸರೇ ಲೋಪ ಎಸಗಿದಾಗ ಅದನ್ನು ಪ್ರಶ್ನೆ ಮಾಡುವ ಹಕ್ಕು ಕೂಡ ಸಾರ್ವಜನಿಕರಿಗೆ ಇದೆ. ಇನ್ನು ಕೆಲವು ಪೊಲೀಸರು ಹೀರೋಗಳಾಗುವುದಕ್ಕೆ ಇತರ ಮಾಡುತ್ತಾರೆ. ಇಂತಹ ಘಟನೆ ಆಗಬಾರದು ಎಂದು ಮನವರಿಕೆ ಮಾಡಲು ಬಂದಿದ್ದೇವೆ. ಎಸಿಪಿ ಚಂದನ್ ಅವರ ಮೇಲೆ ನನಗೆ ಯಾವುದೇ ದ್ವೇಷ ಇಲ್ಲ ಎಂದು ಮಾತನಾಡಿದ್ದರು.
ಘಟನೆ ವೇಳೆ ಬಂದಂತಹ ಅಬ್ದುಲ್​ ರಜಾಕ್​ ಮೇಲೆ ಯಾವುದೇ ಪ್ರಕರಣ​ ದಾಖಲಿಸಲ್ಲ. ಆದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಅಲ್ಲಿಗೆ ಹೋದವರನ್ನ ಠಾಣೆಗೆ ಕರೆದುಕೊಂಡು ಬಂದು ಹಲ್ಲೆ ಮಾಡ್ತೀರಾ, ಅವರ ಬಟ್ಟೆ ಬಿಚ್ಚಿಸುತ್ತಿರಾ ಅಥವಾ ಇಲ್ಲಿ ಸಲಿಂಗ ಕಾಮಿಗಳು ಇದ್ದಾರಾ ಎಂದು ಪೊಲೀಸರ ವಿರುದ್ದ ಕಿಡಿಕಾರಿದ್ದರು.
ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಲಾಗಿತ್ತು ಎಂಬ ಅಮಿತ್ ಷಾ ಹೇಳಿಕೆಗೆ ಕೇರಳ ಸಿಎಂ ತಿರುಗೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
