ಬೆಂಗಳೂರು:ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಶಿಖರವಿಂದ ಸಾಗರ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಯುವ ಜನಸೇವಾ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದರು. ಇದೊಂದು ಐತಿಹಾಸಿಕ ಯಾನವಾಗಿದ್ದು, ರಾಜ್ಯದ ಐವರು ಯುವತಿಯರು ಕಾಶ್ಮೀರದ ಕೊಲ್​ಹೋಯ್ ಪರ್ವತ ಹತ್ತುವುದರ ಜತೆಗೆ ಕಾಶ್ಮೀರದಿಂದ ಹೊರಟು 3000 ಕಿ.ಮೀ. ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿ, ಅಲ್ಲಿಂದ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ 300 ಕಿ.ಮೀ. ಸಮುದ್ರದ ಮೂಲಕ ಕಯಾಕಿಂಗ್ ಯಾನ ಮಾಡಿ ಮಂಗಳೂರು ತಲುಪಲಿದ್ದಾರೆ. ಇದು ಸುಮಾರು 45 ದಿನಗಳ ಸಾಹಸ ಯಾತ್ರೆಯಾಗಿದ್ದು, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡಮಿ ಹಾಗೂ ಭಾರತೀಯ ಪರ್ವತರೋಹಣ ಸಂಸ್ಥೆಯ ಸಹಯೋಗದೊಂದಿಗೆ ನಡೆಸುತ್ತಿರುವ ಈ ಯಾನಕ್ಕೆ ಆ.17ರಂದು ಚಾಲನೆ ನೀಡಲಾಗುವುದು ಎಂದರು.
ಪಾಲ್ಗೊಳ್ಳುತ್ತಿರುವ ಸಾಹಸಿಗರು:ಪುಷ್ಪ (ಮಡಿಕೇರಿ), ಐಶ್ವರ್ಯ ಹಾಗೂ ಧನಲಕ್ಷಿ್ಮ (ಶಿವಮೊಗ್ಗ), ಆಶಾ (ಬೆಂಗಳೂರು) ಮತ್ತು ಬಿಂದು (ಮೈಸೂರು) ಯಾನದಲ್ಲಿ ಪಾಲ್ಗೊಳ್ಳುತ್ತಿರುವ ಸಾಹಸಿಗರಾಗಿದ್ದಾರೆ.
ಮಿಷನ್ ಒಲಿಂಪಿಕ್ಸ್:ಪ್ಯಾರಿಸ್​ನಲ್ಲಿ ನಡೆಯುವ 2024ರ ಒಲಿಂಪಿಕ್ಸ್​ಗೆ ರಾಜ್ಯದಿಂದ ಕನಿಷ್ಟ 100 ಕ್ರೀಡಾಪಟುಗಳನ್ನು ಕಳುಹಿಸುವ ಯೋಜನೆ ರೂಪಿಸಿದೆ. ಈಗಾಗಲೆ 35 ಕ್ರೀಡಾಪಟುಗಳನ್ನು ಗುರುತಿಸಲಾಗಿದೆ. ಈ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪೋ›ತ್ಸಾಹ ಧನ ನೀಡಲಾಗುವುದು ಎಂದರು.
ಸ್ವಾತಂತ್ರ್ಯ ಅಮೃತ ಮಹೋತ್ಸವ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್​ಎಸ್​ಎಸ್ ಕೋಶ 75ನೇ ಸ್ವಾತಂತ್ರ್ಯ ಮಹೋತ್ಸವ ಸಂಭ್ರಮದಿಂದ ಆಚರಿಸುವುದರೊಂದಿಗೆ ಸ್ವಾತಂತ್ರ ಹೋರಾಟದ ಮೌಲ್ಯ ಇಂದಿನ ಯುವಜನತೆಗೆ ಮುಟ್ಟಿಸುವ ಉದ್ದೇಶ ಹೊಂದಿದೆ. 48 ವಿವಿಗಳು, 6 ನಿರ್ದೇಶನಾಲಯಗಳು 75 ಕಾರ್ಯಕ್ರಮ ನಡೆಸಲಿವೆ ಎಂದು ನಾರಾಯಣಗೌಡ ಹೇಳಿದರು.
ಮಂಡ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ:ಕ್ರೀಡಾಪಟುಗಳನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಲು ಕಂಠೀರವ ಸ್ಟೇಡಿಯಂನಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪಿಸ ಲಾಗಿದ್ದು, ಪ್ರಸಕ್ತ ಸಾಲಿನಿಂದ 2 ಕೋಟಿ ರೂ. ವೆಚ್ಚದಲ್ಲಿ ಮಂಡ್ಯದಲ್ಲಿಯೂ ಈ ಕೇಂದ್ರ ಸ್ಥಾಪಿಸಲಾಗುವುದು ಎಂದ ನಾರಾಯಣಗೌಡ, ಪೊಲೀಸ್ ಇಲಾಖೆಯಲ್ಲಿ ಈಗಾಗಲೆ ಶೇ.2 ಮೀಸಲಾತಿಯನ್ನು ಕ್ರೀಡಾಪಟುಗಳಿಗೆ ಮೀಸಲಿಸಿದ್ದು, ಇತರ ಇಲಾಖೆಗಳಗೂ ವಿಸ್ತರಿಸುವ ಕಾರ್ಯ ಚಾಲನೆಯಲ್ಲಿದೆ ಎಂದರು.
ಯೂನಿವರ್ಸಿಟಿ ಗೇಮ್ಸ್-2021:ದೇಶದ ಪ್ರತಿಷ್ಠಿತ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್- 2021 ಅನ್ನು ಬೆಂಗಳೂರಿನಲ್ಲಿ 2022ರ ಮಾರ್ಚ್ 5ರಿಂದ 12 ದಿನ ನಡೆಸಲಾಗುತ್ತಿದ್ದು, ದೇಶದ ಎಲ್ಲೆಡೆಯಿಂದ 20 ಕ್ರೀಡೆಗಳ 7000 ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದೆ., ಪ್ರಧಾನಿ ಮೋದಿ ಅವರನ್ನು ಕ್ರೀಡಾಕೂಟ ಉದ್ಘಾಟನೆಗೆ ಆಹ್ವಾನಿಸಲಾಗುವುದು. ಕ್ರೀಡಾಕೂಟದ ಆಯೋಜನೆ ಜೈನ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಡೆಯಲಿದೆ ಎಂದು ನಾರಾಯಣಗೌಡ ತಿಳಿಸಿದರು.
ಬೆಂಕಿ ಹಚ್ಚಲು ಪೆಟ್ರೋಲನ್ನೂ ಕದ್ದಿದ್ದರು, ಬಳಿಕ ಪರಾರಿಯಾಗಲು ಬೈಕನ್ನೂ ಕದ್ದರು; ಶಾಸಕರ ಕಾರುಗಳಿಗೆ ಬೆಂಕಿ ಹಿಂದಿನ ರೋಚ’ಕತೆ’

ನರ್ಸ್​-ಡ್ರೈವರ್​ ಲವ್​ ಟ್ರ್ಯಾಜೆಡಿ; ಕಾರೊಳಗೇ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಆತ್ಮಹತ್ಯೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × five =
Remember me
