ಬೆಂಗಳೂರು: ಫ್ರೀಡಂ ಪಾರ್ಕಿನಲ್ಲಿ ಗುರುವಾರ ಹಿಂದೂ ಮುಸ್ಲಿಂ ಸಿಖ್ ಈಸಾಯಿ ಫೆಡರೇಷನ್ ಬೆಂಗಳೂರು ಸಂಘಟನೆ ಆಯೋಜಿಸಿದ್ದ ಸಿಎಎ ಮತ್ತು ಎನ್ಆರ್ ಸಿ ವಿರೋಧಿಸಿ ಸಮಾವೇಶದ ವೇದಿಕೆ ಮೇಲೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 124ಎ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಆಕೆಯನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಈ ವಿಚಾರಣೆ ಬಳಿಕ ಆಕೆಯನ್ನು ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ. ಈ ಪ್ರಕರಣ ಗಂಭೀರವಾಗಿದ್ದು, ಪ್ರತಿಭಟನೆ ಆಯೋಜಿಸಿದವರೂ ಆತಂಕಿತರಾಗಿದ್ದಾರೆ. ಅವರಿಗೆ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ಕೊಡಲಾಗಿತ್ತು.
ಈ ವಿಚಾರವಾಗಿ, ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನ ಪರ ಯುವತಿ ಘೋಷಣೆ ಕೂಗಿದ ಪ್ರಕರಣ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನವಾಗಿದೆ. ಇಂತಹ ಹೇಳಿಕೆಗಳಿಂದ ಮನಸ್ಸಿಗೆ ನೋವುಂಟಾಗುತ್ತದೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಇಂತಹವರ ವಿರುದ್ದ‌ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಾಕ್ ಪರ ಘೋಷಣೆ ಕೂಗಿದ ಈ ಅಮೂಲ್ಯ ಲಿಯೋನಾ​ ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − ten =
Remember me
