ಬೆಂಗಳೂರು :ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಸೂರ್ಯಕಾಂತಿ ಎಣ್ಣೆ ಸಗಟು ದರದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪೂರೈಕೆಯಲ್ಲಿ ವ್ಯತ್ಯಯವಾದ್ದರಿಂದ ಕಳೆದ 23 ದಿನಗಳಲ್ಲಿ ಪ್ರತಿ ಲೀಟರ್‌ಗೆ 32 ರೂ. ಏರಿಕೆಯಾಗಿದೆ.ಕಳೆದ ಮೂರು ದಿನಗಳ ಹಿಂದೆ ಪ್ರತಿ ಲೀಟರ್‌ಗೆ 22 ರೂ. ಹೆಚ್ಚಳವಾಗಿತ್ತು.
ಮೂರು ದಿನದಿಂದ 10 ರೂ. ಏರಿಕೆ ಕಂಡಿದೆ. ಆಗಸ್ಟ್ ಅಂತ್ಯದಲ್ಲಿ 980 ರೂ. (ಪ್ರತಿ ಬಾಕ್ಸ್) ಇದ್ದ ದರ, ಶುಕ್ರವಾರ 1,260 ರಿಂದ 1300 ರೂ.ವರೆಗೆ ಮಾರಾಟವಾಗಿದೆ. ಇದು ಗ್ರಾಹಕರಿಗೆ ಹೊರೆಯಾಗಿದ್ದು, ಅನ್‌ಲಾಕ್ ನಂತರ ಅಡುಗೆ ಎಣ್ಣೆಗೆ ಬೇಡಿಕೆ ಹೆಚ್ಚಾಗಿದ್ದು, ಬೇಡಿಕೆಗನುಗುಣವಾಗಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.
ಆಮದು ವ್ಯತ್ಯಯಉಕ್ರೇನ್ ದೇಶದಲ್ಲಿ ಅತಿಹೆಚ್ಚು ಸೂರ್ಯಕಾಂತಿ ಎಣ್ಣೆ ಉತ್ಪಾದನಾ ಕೇಂದ್ರಗಳು ಇವೆ. ಭಾರತ ಸೇರಿ ಹಲವು ರಾಷ್ಟ್ರಗಳು ಈ ದೇಶದಿಂದಲೇ ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿವೆ. ಆಮದು ವ್ಯತ್ಯಯದಿಂದಲೂ ದರದಲ್ಲಿ ಏರಿಕೆ ಕಂಡಿದೆ. ಇನ್ನು ಸ್ವಲ್ಪ ದಿನಗಳು ಇದೇ ರೀತಿ ಬೆಲೆ ಏರಿಕೆಯಾಗಿರಲಿದೆ ಎಂದು ಮಾರ್ಕೆಟಿಂಗ್ ಮ್ಯಾನೇಜರ್ ಅಶೋಕ್‌ಕುಮಾರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 1 =
Remember me
