ನಾಗಮಂಗಲ:ಆದಿಚುಂಚನಗಿರಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಒಕ್ಕಲಿಗರ ವಧು-ವರರ ಸಮಾವೇಶದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಅಕ್ಷರಶಃ ಜಾತ್ರೆಯಂತೆ ಕಂಡುಬಂತು. ವಧುಗಳಿಗಿಂತ ವರರ ಸಂಖ್ಯೆಯೇ ಹೆಚ್ಚಾಗಿತ್ತು. ವಧು-ವರರ ಸಮಾವೇಶದಲ್ಲಿ ರೈತ ಸಮೂಹದ ಹುಡುಗರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡದ್ದು ವಿಶೇಷವಾಗಿತ್ತು. ವಧುಗಳ ನೋಂದಣಿ ಸಂಖ್ಯೆ ಕೇವಲ 250.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ವಾರಕ್ಕೂ ಮೊದಲಿನಿಂದಲೇ ಸುಮಾರು 13 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ವಧು-ವರರು ನೋಂದಣಿ ಮಾಡಿಸಿದ್ದರು. ಈ ಪೈಕಿ ವಧು ನೋಂದಣಿ ಸಂಖ್ಯೆ ಕೇವಲ 250. ತಮ್ಮ ಪಾಲಕರ ಜತೆಗೂಡಿ ವಧು-ವರರು ಆಗಮಿಸಿದ್ದರಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಮಂದಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಬಿಜಿಎಸ್​ ಸಭಾಮಂಟಪದಲ್ಲಿ ಭಾನುವಾರ ಬೆಳಗ್ಗೆ 9.30ಕ್ಕೆ ಆರಂಭವಾದ ಸಮಾವೇಶ ಮಧ್ಯಾಹ್ನ 2 ಗಂಟೆವರೆಗೆ ನಡೆಯಿತು. ಈ ಸಂದರ್ಭ ಸಾವಿರಾರು ಸಂಖ್ಯೆಯಲ್ಲಿದ್ದ ವರರು ವೇದಿಕೆ ಮೇಲೆ ನಿಂತು ತಮ್ಮ ಸ್ವವಿವರಗಳನ್ನು ತಿಳಿಸಿದರು. ಸ್ವವಿವರ ತಿಳಿಸಲು ಸಾಲಿನಲ್ಲಿ ನಿಂತು ಸಾಗುತ್ತಿದ್ದರಿಂದ ನೂಕುನುಗ್ಗಲು ಉಂಟಾಯಿತು. ಬಿಜಿಎಸ್​ ಸಭಾಂಗಣದಲ್ಲಿ ಕೆಲವು ಪಾಲಕರು ನೂಕುನುಗ್ಗಲಿನಲ್ಲಿ ಆಯತಪ್ಪಿ ಕೆಳಗೆಬಿದ್ದು ಅಸ್ವಸ್ಥರಾದರು. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದು ಕೂಡ ಕಂಡುಬಂತು.
ವಧುಗಳಿಗಿಂತ ವರರ ಸಂಖ್ಯೆಯ ಹೆಚ್ಚಾಗಿದ್ದರಿಂದ ವಧುಗಳ ಪಾಲಕರು ಸಮಾವೇಶದ ವೇದಿಕೆ ಹತ್ತಲು ಕೂಡ ಹಿಂದೇಟು ಹಾಕಿದರು. ವಧು-ವರರ ಸಮಾವೇಶದಲ್ಲಿ ರೈತ ಸಮೂಹದ ಹುಡುಗರು ಹೆಚ್ಚಾಗಿದ್ದು ವಿಶೇಷವಾಗಿತ್ತು. ಸಮಾವೇಶದಲ್ಲಿ ಪಾಲ್ಗೊಳ್ಳುವವರಿಗೆ ಭಾನುವಾರ ಬೆಳ್ಳೂರು ಕ್ರಾಸ್​ನಿಂದ ಆದಿಚುಂಚನಗಿರಿವರೆಗೆ ಉಚಿತ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು.

ಸಮಾವೇಶದಲ್ಲಿ ಆದಿಚುಂಚನಗಿರಿ ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿ, ಸಮಾವೇಶಕ್ಕೆ ಇಷ್ಟೊಂದು ದೊಡ್ಡಮಟ್ಟದ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂಬ ನಿರೀಕ್ಷೆಯಿರಲಿಲ್ಲ. ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಒಕ್ಕಲಿಗರ ವಧು-ವರರ ಸಮಾವೇಶವನ್ನು ವ್ಯವಸ್ಥಿತವಾಗಿ ಆಯೋಜಿಸಲಾಗುವುದು ಎಂದರು.
ವಧು-ವರರ ಸಮಾವೇಶವನ್ನು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಬರುವಂತಹ ಸಂದರ್ಭದಲ್ಲಿ ಹಾಗೂ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾದರೆ ಗ್ರಾಮೀಣ ಪ್ರದೇಶದಲ್ಲಿರುವ ಸಮುದಾಯದ ಪ್ರತಿಯೊಬ್ಬರೂ ಹೋರಾಟಕ್ಕೆ ಆಗಮಿಸಬೇಕು ಎಂದು ನಿರ್ಮಲಾನಂದನಾಥ ಶ್ರೀಗಳು ಕರೆ ನೀಡಿದರು.
ಸಾಲುಗಟ್ಟಿ ನಿಂತ ವಾಹನಗಳು:ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ನಾಗಮಂಗಲ ತಾಲೂಕಿನ ಅಂಬಲಜೀರಹಳ್ಳಿ ಗ್ರಾಮದಿಂದ ಆದಿಚುಂಚನಗಿರಿ ಮಠದವರೆಗೆ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ.ಗಟ್ಟಲೆ ದೂರ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಮಾವೇಶ ಮುಗಿದ ನಂತರವೂ ಟ್ರಾಫಿಕ್​ ಜಾಮ್​ ಉಂಟಾಯಿತು.
ರಾತ್ರೋರಾತ್ರಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

ಸೀಬೆ ಬೆಳೆದ ಇಂಜಿನಿಯರ್!

ಮಂಡ್ಯದಲ್ಲಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಬಲಿ: ಬೈಕ್​ನಿಂದ ಕೆಳಗೆ ಬಿದ್ದ ಮಗನ ಮೇಲೆ ಹರಿದ ಲಾರಿ… ತಂದೆ ಕಣ್ಣೆದುರೇ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 11 =
Remember me
