| ಕೆ.ಎನ್.ರಾಘವೇಂದ್ರ ಮಂಡ್ಯ
ಅಧಿಕಾರಕ್ಕೆ ಬರುವ ಮುನ್ನ ಡಿ.ಕೆ.ಶಿವಕುಮಾರ್ ಅವರನ್ನು ‘ಮುಖ್ಯಮಂತ್ರಿ ಅಭ್ಯರ್ಥಿ’ ಎಂಬಂತೆ ಬಿಂಬಿಸಿದ ಕಾಂಗ್ರೆಸ್, ಇದೀಗ ಹಿಂದೇಟು ಹಾಕುತ್ತಿರುವುದು ಹಳೇ ಮೈಸೂರು ಭಾಗದ ಒಕ್ಕಲಿಗ ಸಮುದಾಯವನ್ನು ಕೆರಳಿಸುತ್ತಿದೆ. ಡಿಕೆಶಿ ಮುಖ್ಯಮಂತ್ರಿ ಗಾದಿ ಏರುತ್ತಾರೆನ್ನುವ ಕಾರಣಕ್ಕೆ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಆದರೆ ಪ್ರಸ್ತುತ ಪಕ್ಷದೊಳಗೆ ನಡೆಯುತ್ತಿರುವ ಚಟುವಟಿಕೆಗಳು ಮುಂದಿನ ಚುನಾವಣೆಗಳಲ್ಲಿ ಕಂಟಕವಾಗುವ ಮುನ್ಸೂಚನೆ ತೋರಿಸುತ್ತಿದೆ.
ಯಾರೂ ಒಲ್ಲೆ ಎಂದಾಗ ಕೆಪಿಸಿಸಿ ಚುಕ್ಕಾಣಿ ಹಿಡಿದ ಡಿ.ಕೆ.ಶಿವಕುಮಾರ್ ರಾಜ್ಯಾದ್ಯಂತ ಸುತ್ತಿ ಪಕ್ಷ ಬಹುಮತ ಪಡೆಯುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಮುಖವಾಗಿ ಹಳಿ ತಪ್ಪಿದ್ದ ಪಕ್ಷವನ್ನು ಸರಿದಾರಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಇದೀಗ ಡಿಕೆಶಿಯನ್ನು ಕಡೆಗಣಿಸುತ್ತಿದೆ ಎಂಬುದು ಹಳೇ ಮೈಸೂರು ಭಾಗದಲ್ಲಿ ರ್ಚಚಿತ ವಿಷಯವಾಗಿದೆ. ಪರಿಣಾಮ, ಸಮುದಾಯದ ಜನರು ಡಿಕೆಶಿ ಬೆನ್ನಿಗೆ ನಿಂತು ಸಿಎಂ ಹುದ್ದೆ ನೀಡುವಂತೆ ಪಕ್ಷದ ನಾಯಕರನ್ನು ಆಗ್ರಹಿಸುತ್ತಿದ್ದಾರೆ.
ಕಾಂಗ್ರೆಸ್ ಬೆಂಬಲಿಸಿದ ಒಕ್ಕಲಿಗರು:ಸಮುದಾಯದ ನಾಯಕ ಸಿಎಂ ಹುದ್ದೆ ಅಲಂಕರಿಸುತ್ತಾರೆನ್ನುವ ಕಾರಣಕ್ಕೆ ಒಕ್ಕಲಿಗರು ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸಿರುವುದು ಗುಟ್ಟಿನ ವಿಷಯವಲ್ಲ. ಇದರ ಪರಿಣಾಮ ಮಂಡ್ಯ ಜಿಲ್ಲೆಯ 5, ರಾಮನಗರ ಜಿಲ್ಲೆಯ 3, ತುಮಕೂರು ಜಿಲ್ಲೆಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಅನುಕೂಲವಾಯಿತು. ಅಂದರೆ ಕೈ ಅಭ್ಯರ್ಥಿಗಳ ಗೆಲುವಿನಲ್ಲಿ ಒಕ್ಕಲಿಗ ಸಮುದಾಯದ ಪಾಲೂ ಇದೆ. ಮತಯಾಚನೆ, ಪ್ರಜಾಧ್ವನಿ ಸಮಾವೇಶದಲ್ಲಿಯೂ ಡಿಕೆಶಿ, ನಾನು ಸಿಎಂ ಆಗುತ್ತೇನೆ, ಸಮುದಾಯ ಒಮ್ಮೆ ಬೆಂಬಲಿಸಿ ಎಂದು ಮನವಿ ಮಾಡಿಕೊಂಡಿದ್ದರು. ಅದಕ್ಕೆ ಸಮುದಾಯ ಮನ್ನಣೆ ನೀಡಿತು. ಮಂಡ್ಯ, ರಾಮನಗರ, ತುಮಕೂರು ಮಾತ್ರವಲ್ಲದೆ, ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಇದೇ ಅಸ್ತ್ರ ಕಾಂಗ್ರೆಸ್​ಗೆ ವರವಾಗಿದೆ. ಆದರೆ ಕಾಂಗ್ರೆಸ್​ನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಒಕ್ಕಲಿಗರು ಅತೃಪ್ತಿ ಹೊರಹಾಕುತ್ತಿದ್ದಾರೆ.
ಒಕ್ಕಲಿಗರ ಸಂಘದ ಬೆಂಬಲ:ಡಿಕೆಶಿ ಪರವಾಗಿ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಬ್ಯಾಟಿಂಗ್ ಮಾಡುತ್ತಿದ್ದಾರೆ. ಸಮುದಾಯದ ಶಾಸಕರು ಡಿಕೆಶಿ ಬೆನ್ನಿಗೆ ನಿಲ್ಲಬೇಕೆಂದು ಆಗ್ರಹಿಸುತ್ತಿದ್ದಾರೆ. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆ ರವಾನಿಸುತ್ತಿದ್ದಾರೆ. ಕೆಲವೇ ತಿಂಗಳಲ್ಲಿ ಲೋಕಸಭೆ ಹಾಗೂ ಯಾವಾಗ ಬೇಕಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಯಬಹುದಾಗಿದೆ. ಆ ಸಮಯದಲ್ಲಿ ಸಮುದಾಯದ ಶಕ್ತಿ ತೋರಬೇಕಾಗುತ್ತದೆ ಎನ್ನುತ್ತಿದ್ದಾರೆ.
ಎಚ್​ಡಿಕೆಗೂ ಸಿಕ್ಕಿದ್ದ ಸಾಥ್:2018ರಲ್ಲಿ ಹಳೇ ಮೈಸೂರು ಭಾಗದ ಜಿಲ್ಲೆಗಳ ಒಕ್ಕಲಿಗರಲ್ಲಿ ಅದರಲ್ಲಿಯೂ ಮಂಡ್ಯ ಜಿಲ್ಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆನ್ನುವ ಅಲೆ ಸುನಾಮಿಯಂತೆ ಬಡಿದಿತ್ತು. ಪರಿಣಾಮ ಜಿಲ್ಲೆಯಲ್ಲಿ ಎಲ್ಲ 7 ಸ್ಥಾನಗಳೂ ಜೆಡಿಎಸ್ ಪಾಲಾಗಿದ್ದವು. ಜತೆಗೆ, ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಎಚ್​ಡಿಕೆ ಸಿಎಂ ಹುದ್ದೆಯನ್ನೂ ಅಲಂಕರಿಸಿದ್ದರು.
ಬೆಂಗಳೂರು:ನಾವು ಕಾನೂನು ಬದ್ಧವಾಗಿ ದೇಶದ ಸಂವಿಧಾನ ಉಳಿಸಲು, ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ವಿುಸಲು ರಾಜ್ಯದ ಜನತೆ ಹಾಗೂ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಇರಲಿ ಎಂದು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನನ್ನ ಪಾಲಿನ ದೇವರು. ಪಕ್ಷ ನನ್ನ ಪಾಲಿನ ದೇವಾಲಯ. ನನಗೆ ತಾಯಿ ಇದ್ದಂತೆ. ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕೆಂಬುದು ಗೊತ್ತಿರುತ್ತದೆ ಎಂದರು. ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ. ನಾನು ಒಬ್ಬನೇ ಹೋಗುತ್ತಿದ್ದೇನೆ. ಒಬ್ಬನೇ ಬರುವಂತೆ ಪ್ರಧಾನ ಕಾರ್ಯದರ್ಶಿಯವರು ನನಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಒಬ್ಬನೇ ಹೋಗುತ್ತಿದ್ದೇನೆ. ನನ್ನ ಆರೋಗ್ಯ ಸುಧಾರಿಸಿದ್ದು, ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ ಎಂದರು. ಜನ ನಮಗೆ ನೀಡಿರುವ ಆಶೀರ್ವಾದ, ನಮ್ಮ ಮೇಲೆ ಇಟ್ಟಿರುವ ನಂಬಿಕೆ, ಉಳಿಸಿ ಬೆಳೆಸಿಕೊಂಡು ಹೋಗಲು ನಾವು ಶ್ರಮಿಸಬೇಕಿದೆ. ನಾನು ನನ್ನ ಕರ್ತವ್ಯ ಮಾಡಿದ್ದೇನೆ ಎಂದರು.
ಪ್ರಯಾಣಿಸುತ್ತಿದ್ದಾಕೆಗೆ ಬಸ್​ನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್​

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​ ಪೈಪೋಟಿ ಮಧ್ಯೆ ಸಿಎಂ ಸ್ಥಾನಕ್ಕೆ ಮತ್ತೊಬ್ಬರು ಆಕಾಂಕ್ಷಿ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:seventeen + seventeen =
Remember me
