ಬೆಂಗಳೂರು:ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರವು 2022ರ ನ. 25ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಆಟೋರಿಕ್ಷಾ ಪ್ರಯಾಣಕ್ಕೆ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ದರ ವಿಧಿಸಿ ಓಲಾ ಮತ್ತು ಊಬರ್ ತಮ್ಮ ಆ್ಯಪ್ ಮೂಲಕ ಆಟೋರಿಕ್ಷಾ ಸೇವೆ ನೀಡುತ್ತಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಈ ಸೇವೆಯನ್ನು ಸ್ಥಗಿತಗೊಳಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಎಎನ್‌ಐ ಟೆಕ್ನಾಲಜೀಸ್ ಪ್ರೈ.ಲಿ. ಮತ್ತು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈ.ಲಿ. ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.
ಅಲ್ಲದೆ ಈಗ ಎತ್ತಿಹಿಡಿಯಲಾಗಿರುವ ಸರ್ಕಾರದ ಆದೇಶದ ಪ್ರಕಾರ ಮತ್ತು ನಿಗದಿಪಡಿಸಿದ ದರದ ಮೇಲೆ ಅಗ್ರಿಗೇಟರ್ ಸಂಸ್ಥೆಗಳಾದ ಓಲಾ ಮತ್ತು ಊಬರ್ ಶೇ. 5 ಸೇವಾ ಶುಲ್ಕ ಸಂಗ್ರಹಿಸಲು ಅರ್ಹರಾಗಿರುತ್ತಾರೆ ಎಂದು ನ್ಯಾಯಾಲಯ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.
ಆಟೋರಿಕ್ಷಾ ಅಗ್ರಿಗೇಟರ್ ಸೇವೆ ಒದಗಿಸಲು ಚಾಲ್ತಿಯಲ್ಲಿರುವ ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ಕಾಲಕಾಲಕ್ಕೆ ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ. 5 ಸೇವಾ ಶುಲ್ಕ ಮತ್ತು ಅನ್ವಯಿಸುವ ಜಿಎಸ್‌ಟಿ ತೆರಿಗೆಯನ್ನು ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ರಾಜ್ಯದ ಎಲ್ಲ ಸಾರಿಗೆ ಪ್ರಾಧಿಕಾರಿಗಳಿಗೆ ರಾಜ್ಯ ಸರ್ಕಾರವು 2022ರ ನ. 25ರಂದು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಓಲಾ ಮತ್ತು ಊಬರ್ ಆಕ್ಷೇಪಿಸಿದ್ದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
