ತುಮಕೂರು:ಕರೊನಾ ವೈರಸ್​ ಸೋಂಕಿಗೆ ತುತ್ತಾಗಿ ಮೃತಪಟ್ಟ ಶಿರಾದ ವೃದ್ಧನ ಇಡೀ ಕುಟುಂಬದವರ ಮೇಲೆ ನಿಗಾ ವಹಿಸಿ ಪ್ರತ್ಯೇಕವಾಗಿ ಇರಿಸಲಾಗಿದೆ.
ಮೃತನಿಗೆ ಮೂವರು ಪತ್ನಿಯರು ಹಾಗೂ 16 ಮಂದಿ ಮಕ್ಕಳು ಇದ್ದಾರೆ ಎಂದು ತಿಳಿದು ಬಂದಿದೆ. ಇವರನ್ನು ಬೇರ್ಪಡಿಸಿ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ.
ಇವರ ಜತೆ ಸಂಪರ್ಕಕ್ಕೆ ಬಂದ 15 ಮಂದಿ ಪತ್ತೆ ಮಾಡಿ ಪ್ರತ್ಯೇಕ ವಾರ್ಡ್​ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅಲ್ಲದೆ ಮೃತ ವ್ಯಕ್ತಿಯ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪತ್ತೆ ಮಾಡಲಾಗುತ್ತಿದೆ. ಈತ ಜತೆ 33 ಮಂದಿ ಪ್ರಯಾಣ ಬೆಳೆಸಿದ್ದರು ಎಂದು ತಿಳಿದು ಬಂದಿದ್ದು, ಅವರ ಪತ್ತೆ ನಡೆಯುತ್ತಿದೆ.
ಶಿರಾದಿಂದ ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಲು ಬಳಸಿದ ಕಾರನ್ನು ಜಿಲ್ಲಾಡಳಿತ ಪತ್ತೆ ಮಾಡುತ್ತಿದೆ.ರಾಜ್ಯದಲ್ಲಿ ಕರೊನಾ ಸೋಂಕಿಗೆ 3 ಮಂದಿ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 55ಕ್ಕೆ ಏರಿದೆ.
ತುಮಕೂರಿನಲ್ಲಿ ಕರೊನಾ ವೈರಸ್​ ಸೋಂಕಿಗೆ ವೃದ್ಧ ಬಲಿ: ರಾಜ್ಯದಲ್ಲಿ 3ನೇ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
