ಬೆಂಗಳೂರು:ಮನೆಯಲ್ಲೇ ಪ್ರತ್ಯೇಕವಾಗಿದ್ದ ಕರೊನಾ ಸೋಂಕು ಶಂಕಿತ ಹಿರಿಯ ಮಹಿಳೆಯೊಬ್ಬರು ಇಂದು ಮೃತಪಟ್ಟಿದ್ದಾರೆ.
ಮೃತ ವೃದ್ಧೆಯು 9 ದಿನದಿಂದ ಕ್ವಾರಂಟೈನ್​ನಲ್ಲಿದ್ದರು. ಮೂಲತಃ ಆಂಧ್ರದ ಹಿಂದೂಪುರ ಮೂಲದ 75 ವರ್ಷದ ವೃದ್ಧೆ‌ ಚಿಕ್ಕಬಳ್ಳಾಪುರದ ಗೌರಿಬಿದನೂರು ನಗರದ ಮಗನ ಮನೆಯಲ್ಲಿ ಕ್ವಾರಂಟೈನ್​​ಗೆ ಓಳಗಾಗಿದ್ದರು. ಮೆಕ್ಕಾ ಪ್ರವಾಸದಿಂದ ವಾಪಾಸ್ಸಾಗಿದ್ದರು ಎಂದು ತಿಳಿದುಬಂದಿದೆ.
ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು‌ ಜಿಲ್ಲಾಸ್ಪತ್ರೆಗೆ ವೃದ್ಧೆಯನ್ನು ರವಾನಿಸಲಾಗಿತ್ತು. ನಂತರ ಹೆಚ್ಚಿನ‌ ಚಿಕಿತ್ಸೆಗಾಗಿ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೋರಿಂಗ್​ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ‌ ಮಹಿಳೆ ಸಾವಿಗೀಡಾಗಿದ್ದಾರೆ.
ಮಹಿಳೆಯ ವರದಿ ಬರಬೇಕಿದ್ದು ಕೋರೋನಾ ಸೋಂಕು ಇನ್ನೂ ಧೃಡಪಟ್ಟಿಲ್ಲ. 70 ವರ್ಷ ಆದ ಕಾರಣ ಬಿಪಿ ರಕ್ತದೊತ್ತಡ, ಕಾಲಿನ ಗಾಯದಿಂದ ಬಳಲುತ್ತಿದ್ದರು. ಹೃದಯದ ತೊಂದರೆಯು ಇತ್ತು. ಹೀಗಾಗಿ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ಆಗಮಿಸಿದ್ದರು ಎನ್ನಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು ಮೆಕ್ಕಾದಿಂದ ಹಿಂತಿರುಗಿದ್ದ ಗೌರಿಬಿದನೂರಿನ 75 ವರ್ಷದ ಸೋಂಕಿತ ವ್ಯಕ್ತಿಯೊಬ್ಬರು ರಾತ್ರಿ ಒಂದು ಗಂಟೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಇವರು ಮಧುಮೇಹ, ಎದೆನೋವು ಹಾಗೂ ಕಾಲಿನ ಗಾಯದಿಂದ ಬಳಲುತ್ತಿದ್ದರು. ಮರಣದ ಕಾರಣ ಏನೆಂದು ಪರೀಕ್ಷಾ ವರದಿಗಳು ಬಂದ ನಂತರವೇ ಖಚಿತವಾಗಲಿದೆ ಎಂದಿದ್ದಾರೆ.
ಇವರು ಗೌರಿಬಿದನೂರಿನ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿಂದ ನಿನ್ನೆ ಅವರನ್ನು ಬೌರಿಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು ಎಂದು ಶ್ರೀರಾಮುಲು ಅವರು ಮಾಹಿತಿ ನೀಡಿದ್ದಾರೆ.
ಕರೊನಾ ಲಾಕ್​ಡೌನ್​ನಿಂದ ರಾಷ್ಟ್ರಕ್ಕೆ ಎಷ್ಟು ಹೊರೆಯಾಗಲಿದೆ? ಪರಿಣಿತರ ಸಲಹೆ ಏನು?
ಮೆಕ್ಕಾದಿಂದ ಹಿಂತಿರುಗಿದ್ದ ಗೌರಿಬಿದನೂರಿನ 75 ವರ್ಷದ#Covid19ಸೋಂಕಿತ ವ್ಯಕ್ತಿಯೊಬ್ಬರು ರಾತ್ರಿ ಒಂದು ಗಂಟೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಇವರು ಮಧುಮೇಹ, ಎದೆನೋವು ಹಾಗೂ Hip Fracture ನಿಂದ ಬಳಲುತ್ತಿದ್ದರು. ಮರಣದ ಕಾರಣ ಏನೆಂದು ಪರೀಕ್ಷಾ ವರದಿಗಳು ಬಂದ ನಂತರವೇ ಖಚಿತವಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
