ದಾವಣಗೆರೆ:ವೃದ್ಧೆಯೊಬ್ಬರು ಕೋರ್ಟ್​ ಹಾಲ್​ಗೆ ಪ್ರವೇಶ ಮಾಡುತ್ತಿದ್ದಂತೆ ಕುಸಿದು ಬಿದ್ದ ಪ್ರಕರಣ ನಡೆದಿದೆ. ಅವರಿಗೆ ಜಿಲ್ಲಾಧಿಕಾರಿಯೇ ಸ್ವತಃ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಹಾವೇರಿ‌ ಮೂಲದ ಮುರಿಗೆಮ್ಮ ಧರ್ಮಪ್ಪ (73) ಕುಸಿದು ಬಿದ್ದ ಅಜ್ಜಿ. ಇವರು ಪ್ರಕರಣವೊಂದರ ವಿಚಾರಣೆ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿಗಳ‌ ಕೋರ್ಟ್​ಗೆ ಹಾಜರಾಗಿದ್ದರು. ಆದರೆ ಕೋರ್ಟ್​ ಹಾಲ್​ಗೆ ಪ್ರವೇಶ ಮಾಡುತ್ತಿದ್ದಂತೆ ಕುಸಿದು ಬಿದ್ದರು.
ಇದನ್ನೂ ಓದಿ:ಬೆಂಗಳೂರಲ್ಲಿ ಕಂಪನಿ ನೋಂದಣಿ ಮಾಡಿಸಿಕೊಳ್ಳಲಾಗದೆ ಅಮೆರಿಕಕ್ಕೆ ಹಿಂದಿರುಗುವೆ ಎಂದ ಉದ್ಯಮಿ!
ವೈದ್ಯರೂ ಆಗಿರುವ ಜಿಲ್ಲಾಧಿಕಾರಿ ಡಾ.ಎಂ.ವಿ.‌ವೆಂಕಟೇಶ್ ಕೂಡಲೇ ವಿಚಾರಣೆ ನಿಲ್ಲಿಸಿ ಈ ಅಜ್ಜಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಕುಸಿದು ಬಿದ್ದು ಎಚ್ಚರ ತಪ್ಪಿದ ಅಜ್ಜಿ ಪ್ರಥಮ ಚಿಕಿತ್ಸೆಯಿಂದಾಗಿ ಕೆಲವೇ ನಿಮಿಷಗಳಲ್ಲಿ ಚೇತರಿಸಿಕೊಂಡಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

ಎಲ್ಲರೂ ಬೇಲಿ ಹಾರುತ್ತಿದ್ದಾರೆ ಎಂದ ಖುಷ್​​ಬೂ; ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಹೀಗಂದಿದ್ದೇಕೆ?

‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
