ಬೆಂಗಳೂರು:ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿಯಾಗಿದ್ದು, ಪಾದಚಾರಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಕೊಡುಗೆಹಳ್ಳಿ ನಿವಾಸಿ ಮುನಿಯಮ್ಮ (61) ಮೃತ ವೃದ್ಧೆ. ವಿಧಾನಸೌಧ ಡಿ ಗ್ರೂಪ್ ನೌಕರಿಯಿಂದ ನಿವೃತ್ತಿ ಆಗಿದ್ದ ಮುನಿಯಮ್ಮ, ಸೋಮವಾರ ಬ್ಯಾಂಕ್​ನಲ್ಲಿನ ಕೆಲಸಕ್ಕಾಗಿ ಬಂದಿದ್ದರು.
ಪೊಲೀಸ್ ಕಾರ್ನರ್ ಜಂಕ್ಷನ್‌ನಲ್ಲಿ ಮಧ್ಯಾಹ್ನ 1.45ರಲ್ಲಿ ನೃಪತುಂಗ ರಸ್ತೆಯನ್ನು ದಾಟುತ್ತಿರುವಾಗ ನೃಪತುಂಗ ರಸ್ತೆ ಕಡೆಯಿಂದ ವೇಗವಾಗಿ ಬಂದ ಕಸದ ಲಾರಿ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ವೃದ್ಧೆ ಕೆಳಗೆ ಬಿದ್ದಿದ್ದಾರೆ. ಲಾರಿಯ ಎಡಭಾಗದ ಚಕ್ರಗಳು ವೃದ್ಧೆಯ ಎರಡು ಕಾಲಿನ ಮೇಲೆ ಹರಿದ ಪರಿಣಾಮ ತೀವ್ರ ಗಾಯಗೊಂಡು ಕುಸಿದು ಬಿದ್ದಿದ್ದರು.
ಇದನ್ನೂ ಓದಿ:‘ಕಾಸಿಗಾಗಿ ಹುದ್ದೆ’ಯಲ್ಲಿ 500 ಕೋಟಿ ರೂ. ಕೈಬದಲು: ಕುಮಾರಸ್ವಾಮಿ ಗಂಭೀರ ಆರೋಪ
ಜಂಕ್ಷನ್‌ನಲ್ಲಿ ಕರ್ತವ್ಯನಿರತ ಹೆಡ್‌ಕಾನ್‌ಸ್ಟೆಬಲ್ ಸಿ.ಎಸ್. ಯೋಗೇಶ್, ಸಾರ್ವಜನಿಕರ ಸಹಾಯದಿಂದ ಸಮೀಪದ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಗಾಯವಾಗಿ ರಕ್ತಸ್ರಾವ ಉಂಟಾದ ಪರಿಣಾಮ ಚಿಕಿತ್ಸೆ ಫಲಿಸದೆ ವೃದ್ಧೆ ಮೃತಪಟ್ಟಿದ್ದಾರೆ. ಲಾರಿ ಚಾಲಕ ಶಿವಕುಮಾರ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲಸೂರು ಗೇಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎದೆಹಾಲಿನಿಂದಲೇ ಗಿನ್ನೆಸ್ ದಾಖಲೆ ಮಾಡಿದ ಮಹಾತಾಯಿ!; ಇಷ್ಟೊಂದು ಎದೆಹಾಲು ಇದುವರೆಗೆ ಯಾರೂ ಕೊಟ್ಟಿಲ್ಲ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 8 =
Remember me
