ಬೆಂಗಳೂರು:ವಿಶ್ವ ನೃತ್ಯ ದಿನಾಚರಣೆ ಅಂಗವಾಗಿ ಮೇ.1 ಮತ್ತು 2ರಂದು ಸೃಷ್ಟಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಜಂಟಿಯಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಫ್ರೆಂಚ್ ನೃತ್ಯ ಕಲಾವಿದ, ಪ್ರಸಿದ್ಧ ನಾಟ್ಯ ಸಂಯೋಜಕ ಜೀನ್ ಜಾರ್ಜ್ ನೋರ್ವೆಯವರ ಹುಟ್ಟಿದ ದಿನವನ್ನು ವಿಶ್ವ ನೃತ್ಯ ದಿನಾಚರಣೆಯನ್ನಾಗಿ ಆಚರಿಸಲಾಗುವುದು.
ಕಾರ್ಯಕ್ರಮದಲ್ಲಿ ಉದಯೋನ್ಮುಖ ಕಲಾವಿದರಿಗೆ ಮತ್ತು ನೃತ್ಯ ದಿಗ್ಗಜರಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು, ಭರತನಾಟ್ಯ, ಕೂಚುಪುಡಿ, ಒಡಿಸ್ಸಿ, ಕಥಕ್ ಸೇರಿದಂತೆ 25 ತಂಡಗಳ ಸುಮಾರು 100 ಕಲಾವಿದರು ಪ್ರದರ್ಶನ ನೀಡಲಿದ್ದಾರೆ.
ವಿಶ್ವ ನೃತ್ಯ ದಿನಾಚರಣೆ ಅಂಗವಾಗಿ ಮೇ.01ರಂದು ಸಂಜೆ ‘ಸೃಷ್ಟಿ ರಾಷ್ಟ್ರೀಯ ಪ್ರಶಸ್ತಿ’ ಮತ್ತು ‘ರೋಟರಿ ಸೇವಾ ಪರಿಣಿತಿ ಪ್ರಶಸ್ತಿ’ ಪ್ರದಾನ ನಡೆಯಲಿದ್ದು, ರಾಜಮಾತಾ ಪ್ರಮೋದಾದೇವಿ ಒಡೆಯರ್ ಅವರು ಲಕ್ಷ್ಮಿ ಗೋಪಾಲಸ್ವಾಮಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಂತರ ಲಕ್ಷ್ಮಿ ಗೋಪಾಲ್ ಸ್ವಾಮಿ ಅವರು ನೃತ್ಯ ಪ್ರದರ್ಶನ ನಡೆಸಿಕೊಡಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 8 =
Remember me
