ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಮತ್ತು ಶಕ್ತಿ ಯೋಜನೆಯ ವಿರುದ್ಧ ಖಾಸಗಿ ವಾಹನ ಚಾಲಕರು ಮತ್ತು ಮಾಲೀಕರು ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಕಾರಣ ಓಲಾ-ಉಬರ್​,ಆಟೋ, ಖಾಸಗಿ ಬಸ್​​ಗಳು ಸಂಚಾರ ಮಾಡುವುದಿಲ್ಲ.
ಇದನ್ನೂ ಓದಿ:ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಪ್ರಮುಖ ಆರೋಪಿಯ ಬಂಧನ
ಜುಲೈ 26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿ 12 ರವರೆಗೆ ಖಾಸಗಿ ವಾಹನಗಳ ಸಂಚಾರ ಇರುವುದಿಲ್ಲ. ರಾಜ್ಯ ಸರ್ಕಾರ ಮತ್ತು ಶಕ್ತಿ ಯೋಜನೆಯ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸಲು ಖಾಸಗಿ ವಾಹನ ಚಾಲಕರು ಮತ್ತು ಮಾಲೀಕರು ನಿರ್ಧಾರ ಮಾಡಿದ್ದಾರೆ.

“ರಾಜ್ಯ ಸರ್ಕಾರ ಮಹಿಳೆಯರಿಗೆ ಬಸ್​​ನಲ್ಲಿ ಉಚಿತ ಪ್ರಯಾಣ ಮತ್ತು ವೈಟ್​​ ಬೋರ್ಡ್ ಹೊಂದಿರುವ​​ ದ್ವಿಚಕ್ರ ವಾಹನಗಳು ಅಕ್ರಮವಾಗಿ ಟ್ಯಾಕ್ಸಿ ಸೇವೆಯನ್ನು ನೀಡುತ್ತಿರುವ ಕಾರಣದಿಂದ ಖಾಸಗಿ ವಾಹನ ಮಾಲೀಕರು ಸಾಕಷ್ಟು ನಷ್ಟವನ್ನು ನೋಡುತ್ತಿದ್ದಾರೆ. ಆಟೋ ಚಾಲಕರು ಮತ್ತು ಖಾಸಗಿ ಬಸ್​ ಮಾಲೀಕರ ಅಗತ್ಯ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ಮಾಡಲಾಗುವುದು ಎಂದು ರಾಜ್ಯ ಖಾಸಗಿ ಸಾರಿಗೆ ಒಕ್ಕೂಟಗಳ ಸಂಘ ಹೇಳಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಒಂದೇ ಬಾರಿಗೆ ನಾಲ್ಕು ಹ್ಯಾಂಡ್ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ!
“ಖಾಸಗಿ ಚಾಲಕರಿಗೆ ಇದರಿಂದ ತುಂಬಲಾರದ ನಷ್ಟ ಉಂಟಾಗುತ್ತಿದ್ದು, ಸಾಲ, ವಿಮೆ, ಮತ್ತು ಜೀವನ ಸಾಗಿಸಲು ಕ್ಲಿಷ್ಟ ಪರಿಸ್ಥಿತಿ ತಲುಪಿದ್ದಾರೆ. ಈ ಕಾರಣಗಳಿಂದ ರಾಜ್ಯದಲ್ಲಿ ಹಿಂದಿಗಿಂತಲೂ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆ ತಲೆದೋರುವ ಪರಿಸ್ಥಿತಿ ಉದ್ಭವವಾಗಲಿದೆ. ಸಾರಿಗೆ ಉದ್ದಿಮೆ 2020ರ ಕೋವಿಡ್ ನಂತರದಲ್ಲಿ ಹಂತ ಹಂತದಲ್ಲಿ ನೆಲಕಚ್ಚಿ ಹೋಗುತ್ತಿದ್ದು, ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಸುದೀರ್ಘ ಪತ್ರ ಬರೆದು ರವಾನಿಸಿದ್ದಾರೆ.
VIDEO| ಲೋಕಾಯುಕ್ತ ಅಧಿಕಾರಿ ಹೆಸರು ಹೇಳಿಕೊಂಡು ಕಂದಾಯ ಅಧಿಕಾರಿಗೆ ವಂಚನೆ ಯತ್ನ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × two =
Remember me
