ಮಂಗಳೂರು:ನೈತಿಕ ಪೊಲೀಸ್​ಗಿರಿಯಿಂದ ಆಗಾಗ ಸುದ್ದಿಯಾಗುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ಅದು ಸದ್ದು ಮಾಡಿದೆ. ಹಿಂದೂ ಹುಡುಗಿಯೊಂದಿಗೆ ತಿರುಗುತ್ತಿದ್ದ ಮುಸ್ಲಿಂ ಹುಡುಗನ ಮೇಲೆ ಹಲ್ಲೆ ನಡೆಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಘಟನೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಕಂಡು ಬಂದ ಹಿಂದೂ-ಮುಸ್ಲಿಂ ಜೋಡಿಯನ್ನು, ಮತ್ತೆ ಕುಮಾರಧಾರಾ ಬಳಿ ಕಂಡಾಗ ಒಂದು ಗುಂಪು ಹುಡುಗನ ಮೇಲೆರಗಿ ಹಲ್ಲೆ ಮಾಡಿದೆ.
ಹಲ್ಲೆಗೊಳಗಾದ ಯುವಕ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದೆ. ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಾಗಿದ್ದು, ಹಲ್ಲೆಗೈದವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾನೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿ ಅಪ್ರಾಪ್ತ ವಯಸ್ಕಳಾಗಿದ್ದು, ಆಕೆಯ ತಂದೆಯೂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಯುವಕನ ವಿರುದ್ಧ ಪೊಲೀಸರು ಪೋಸ್ಕೋ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

ಮನೆ ಬಾಗಿಲಲ್ಲಿ ಕಸ, ಬೆಡ್​ರೂಮ್​ನಲ್ಲಿದ್ದ ಚಿನ್ನಾಭರಣ ನಾಪತ್ತೆ; ಎಚ್ಚರಿಕೆ ಸಾರ್ವಜನಿಕರೇ.. ಈ ಬಗ್ಗೆ ಇರಲಿ ಗಮನ

ಸ್ಮಶಾನದ ಹಾದಿಯಲ್ಲಿ ಕಣ್ಣು ತೆರೆದ ‘ಶವ’!; ಮಹಿಳೆ ಮೃತಪಟ್ಟಳು ಎಂದು ವೈದ್ಯರು ದೃಢೀಕರಿಸಿದ್ದರೂ ಸಂಭವಿಸಿದ ಅಚ್ಚರಿ!

ಸಂಸಾರ ನಿಭಾಯಿಸಲಿಕ್ಕೂ ಇಲ್ಲಿದೆ ಒಂದು ಕೋರ್ಸ್​; ಮದುವೆ ಆಗುವವರಿಗೂ-ಆದವರಿಗೂ ನೀಡ್ತಾರೆ ತರಬೇತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
