ಉತ್ತರಕನ್ನಡ:ತಾಯಿಯೊಂದಿಗೆ ಬಟ್ಟೆ ತೊಳೆಯಲು ತೆರಳಿದ್ದ ಮಗು ಆಕಸ್ಮಿಕವಾಗಿ ನದಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಹೊನ್ನಾವರ ತಾಲೂಕಿನ ಹುಡಗೋಡು ಬಳಿ ನಡೆದಿದೆ.
ಒಂದೂವರೆ ವರ್ಷದ ಕಾರ್ತಿಕ ರಮೇಶ ನಾಯ್ಕ ನಾಪತ್ತೆಯಾಗಿರುವ ಮಗು. ಭಾನುವಾರ ಮಧ್ಯಾಹ್ನ ಮನೆ ಸಮೀಪವೇ ಇರುವ ಗುಂಡಬಾಳಾ ನದಿಗೆ ತಾಯಿ ಜೊತೆ ಬಟ್ಟೆ ತೊಳೆಯಲು ತೆರಳಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಮಗು ನೀರಿಗೆ ಬಿದ್ದಿದ್ದು, ತಕ್ಷಣ ತಾಯಿ ಕೂಗಿಕೊಂಡಿದ್ದಾರೆ.
ಇದನ್ನೂ ಓದಿ:ಟೋಕಿಯೋ ಒಲಿಂಪಿಕ್ಸ್: ಕೊನೆಗೂ ಸಿಕ್ಕ ಬೋಲ್ಟ್ ಉತ್ತರಾಧಿಕಾರಿ…
ಆಗ ಅಕ್ಕಪಕ್ಕದಲ್ಲಿದ್ದ ಜನರು ತಕ್ಷಣ ಸಹಾಯಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ದೋಣಿಯ ಮೂಲಕ ಮಗುವಿಗಾಗಿ ಹುಡುಕಾಟ ನಡೆಸುತ್ತಿದ್ದು, ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
