ಬೆಂಗಳೂರು:ದಾಖಲೆ ಇಲ್ಲದೆ ಆಟೋದಲ್ಲಿ ಸಾಗಿಸಲಾಗುತ್ತಿದ್ದ ಒಂದು ಕೋಟಿ ರೂಪಾಯಿ ಹಣವನ್ನು ಎಸ್​.ಜೆ.ಪಾರ್ಕ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುರೇಶ್​ ಮತ್ತು ಪ್ರವೀಣ್​ ಎಂಬುವವರು ನಗರ ಕಾಳಿಂಗ ರಾವ್ ಬಸ್​ ನಿಲ್ದಾಣದ ಬಳಿ ಹಣ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳಾದ ಸುರೇಶ್​ ಹಾಗೂ ಪ್ರವೀಣ್​ ಇಬ್ಬರು ಆಟೋವನ್ನು ಆನ್​ಲೈನ್​ನಲ್ಲಿ ಬುಕ್​ ಮಾಡಿ ಅದರಲ್ಲಿ ಹಣ ಸಾಗಿಸುತ್ತಿದ್ದರು. ಇಬ್ಬರ ಚಲನವಲನಗಳನ್ನು ಗಮನಿಸಿದ ಪೊಲೀಸರು ಅನುಮಾನಗೊಂಡು ಆಟೋ ಪರಿಶೀಲನೆ ನಡೆಸಿದಾಗ ಹಣ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ:ನ್ಯಾಯಾಂಗದ ಕುರಿತು ಟೀಕೆ; ಲಲಿತ್​ ಮೋದಿಗೆ ಸುಪ್ರೀಂ ಕೋರ್ಟ್​ ಛೀಮಾರಿ
ಆಟೋದಲ್ಲಿ ಸಾಗುವ ವೇಳೆ ಆರೋಪಿಗಳ ಚಲನವಲನಗಳನ್ನು ಗಮನಿಸಿದ ಪೊಲೀಸರು ಎರಡು ಬ್ಯಾಗ್​ ಇರುವುದನ್ನು ಪತ್ತೆ ಮಾಡಿದ್ದಾರೆ. ನಂತರ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಒಂದು ಕೋಟಿ ರೂಪಾಯಿ ಹಣ ಇರುವುದು ಪತ್ತೆಯಾಗಿದೆ.
ಈ ಬಗ್ಗೆ ಆರೋಪಿಗಳ ಬಳಿ ವಿಚಾರಿಸಿದದಾಗ ಯಾವುದೇ ದಾಖಲೆಯನ್ನು ನೀಡಲಿಲ್ಲ ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳಾದ ಸುರೇಶ್ ಮತ್ತು ಪ್ರವೀಣ್ ವಿಜಯನಗರದಿಂದ ಜಯನಗರಕ್ಕೆ ಹಣ ಸಾಗಿಸುತ್ತಿದ್ದರು. ಮಾರ್ಗ ಮಧ್ಯೆ ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗ ಆಟೋ ಕೆಟ್ಟು ನಿಂತಿದೆ.
ಈ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದ ಪೊಲೀಸರು ಆರೋಫಿಗಳು ಅನುಮಾನಸ್ಪದ ರೀತಿಯಲ್ಲಿ ವರ್ತಿಸುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಅವರನ್ನು ಹಿಡಿದು ಪ್ರಶ್ನಿಸಿ ಬ್ಯಾಗ್​ ಪರಿಶೀಲನೆ ಮಾಡಿಧಾಗ ಹಣ ಇರುವುದು ಬೆಳಕಿಗೆ ಬಂದಿದೆ.
ವಿಚಾರಣೆ ವೇಳೆ ಇದು ಬಿಜೆಪಿ ನಾಯಕರೊಬ್ಬರಿಗೆ ಸೇರಿದ್ದ ಹಣವಾಗಿದ್ದು ವಿಜಯನಗರದ ರಾಜೇಶ್​ ಎಂಟರ್​ಪ್ರೈಸಸ್​ನಿಂದ ಜಯನಗರಕ್ಕೆ ಕೊಂಡೊಯ್ಯಲಾಗುತ್ತಿತ್ತು ಎಂದು ಬಾಯ್ಬಿಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
