ಯಾದಗಿರಿ:ಟ್ರ್ಯಾಕ್ಟರ್​​-ಬೈಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಮೃತಪಟ್ಟು, ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ರಸ್ತಾಪೂರ ಕ್ರಾಸ್​ನಲ್ಲಿ ನಡೆದಿದೆ.
ವಡಗೇರಾ ತಾಲ್ಲೂಕಿನ ಕೋಡಾಲ ಗ್ರಾಮದ ಮೆಹಬೂಬ್​ (50) ಮೃತ ದುರ್ದೈವಿ. ಅಪಘಾತದಲ್ಲಿ ಬೈಕ್​ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಹಪುರದಲ್ಲಿರುವ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಕುತೂಹಲ ಕೆರಳಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ-ಕೇಂದ್ರ ಗೃಹ ಸಚಿವ ಅಮಿತ್​​ ಷಾ ಭೇಟಿ
ಶಹಾಪುರ ತಾಲ್ಲೂಕಿನ ರಸ್ತಪೂರ ಕ್ರಾಸ್​ನಲ್ಲಿ ಘಟನೆ ನಡೆದಿದ್ದು, ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ ರಸ್ತೆ ಬದಿ ಉರುಳಿ ಬಿದ್ದಿದೆ. ಟ್ರ್ಯಾಕ್ಟರ್​ ಉರುಳಿದ ಪರಿಣಾಮ ಅದರ ಅಡಿಯಲ್ಲಿ ಸಿಲುಕಿದ್ದ ಚಾಲಕ ಮೆಹಬೂಬ್​ ಸ್ಥಳದಲ್ಲೇ ಅಸುನೀಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಶಹಾಪುರ ಠಾಣೆಯ ಪೊಲೀಸ್​ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನೂ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + nine =
Remember me
