ಕೋಲಾರ:ತಂಗಿಯ ಸಂಸಾರ ಸರಿಪಡಿಸಲೆಂದು ಹೋಗಿದ್ದ ಅಣ್ಣ, ಬಳಿಕ ತಂಗಿಯ ಗಂಡನಿಂದಲೇ ಕೊಲೆಗೀಡಾದ ದುರಂತವೊಂದು ಸಂಭವಿಸಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಗೌತಮನಗರದಲ್ಲಿ ಈ ಘಟನೆ ನಡೆದಿದೆ.
ಸುರೇಶ್​ (36) ಕೊಲೆಗೀಡಾಗಿದ್ದು, ಸಹೋದರ ಹರೀಶ್ (33) ಗಾಯಗೊಂಡಿದ್ದಾನೆ. ತಂಗಿ ಗಂಡ ಬಾಬು ಕೊಲೆ ಆರೋಪಿ. ಬಾಬು ಕೂಡ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಹನುಮಂತ ಹುಟ್ಟಿದ್ದು ಅಂಜನಾದ್ರಿ ಬೆಟ್ಟದಲ್ಲೇ; ಸದ್ಯದಲ್ಲೇ ಸರ್ಕಾರದಿಂದ ಘೋಷಣೆ?
ಸುರೇಶ್ ತಂಗಿಯನ್ನು ಬಾಬು ಮದುವೆಯಾಗಿದ್ದು, ಪತಿ-ಪತ್ನಿ ನಡುವೆ ಕೆಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ತಂಗಿಯ ಸಂಸಾರವನ್ನು ಸರಿಪಡಿಸಿ ಬರೋಣ ಎಂದು ಸಹೋದರರಾದ ಸುರೇಶ್​-ಹರೀಶ್​ ಅವರು ಬಾಬು ಮನೆಗೆ ಬಂದಿದ್ದರು.
ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು, ಮಾರಾಮಾರಿ ನಡೆದು ಅದರಲ್ಲಿ ಸುರೇಶ್ ಕೊಲೆಗೀಡಾಗಿದ್ದಾನೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೋಚಕ ರಕ್ಷಣಾ ಕಾರ್ಯಾಚರಣೆ; ಟ್ರೆಕ್ಕಿಂಗ್ ವೇಳೆ ಕಂದಕಕ್ಕೆ ಬಿದ್ದವನ ರಕ್ಷಣೆ

ಕಬ್ಬು ತಿನ್ನುವ ಆಸೆಯಿಂದಾಗಿ ಪ್ರಾಣ ಕಳ್ಕೊಂಡ ಬಾಲಕ; ಟ್ರ್ಯಾಕ್ಟರ್​ ಅಡಿಗೆ ಸಿಲುಕಿ ಸಾವು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nine =
Remember me
