ಮಡಿವಾಳ:ರಾಜಧಾನಿ ಬೆಂಗಳೂರಿನ ಸಮೂಹ ಸಾರಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ನಮ್ಮ ಮೆಟ್ರೋ ಕಾಮಗಾರಿ ಸಂದರ್ಭದಲ್ಲಿ ಇನ್ನೊಂದು ಅವಘಡವಾಗಿದೆ. ಮಡಿವಾಳದಲ್ಲಿ ನಡೆಯುತ್ತಿದ್ದ ಮೆಟ್ರೋ ಕಾಮಗಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ನಮ್ಮ ಮೆಟ್ರೋ ಕಾಮಗಾರಿ ಸಂದರ್ಭ ಪಿಲ್ಲರ್​ಗೆ ಹಾಕುವ ತಂತಿ ಮೇಲೆತ್ತುತ್ತಿರುವಾಗ ಏಕಾಏಕಿ ಕ್ರೇನ್​ನ ಹೈಡ್ರಾಲಿಕ್​ನಲ್ಲಿ ಸಮಸ್ಯೆ ಉಂಟಾಗಿ ಕ್ರೇನ್ ಹಠಾತ್ ಕುಸಿದಿದೆ. ಆಗ ಕಂಬಿಗಳೆಲ್ಲ ವಾಲಿ ಬಿದ್ದಿವೆ. ಅದೃಷ್ಟವಶಾತ್ ಆ ಸಮಯದಲ್ಲಿ ಕಾರ್ಮಿಕರು ಕಡಿಮೆ ಇದ್ದಿದ್ದರಿಂದ ಸಂಭಾವ್ಯ ಭಾರಿ ಅನಾಹುತ ತಪ್ಪಿದೆ.
ಇದನ್ನೂ ಓದಿ:ಉರಗಗಳ ಮಹಾ ಕದನ: ವಿಷದಿಂದ ಹೆಬ್ಬಾವು, ಉಸಿರುಗಟ್ಟಿ ಕಾಳಿಂಗ ಸರ್ಪ ಸಾವು!
ಈ ಪ್ರಕರಣದಿಂದಾಗಿ ಕೆಲ ಹೊತ್ತು ಮಡಿವಾಳ ಜಂಕ್ಷನ್ ಬಳಿ ಆತಂಕದ ಪರಿಸ್ಥಿತಿ ಉಂಟಾಗಿತ್ತು. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸಂಚಾರ ದಟ್ಟಣೆ, ಜನ ಜಮಾವಣೆಯನ್ನು ಚದುರಿಸಿ ಸೂಕ್ತ ಕ್ರಮಕೈಗೊಂಡರು.
‘ಮೆದುಳು ತಿನ್ನುವ ಅಮೀಬಾ’ ಹತ್ತನೇ ತರಗತಿ ವಿದ್ಯಾರ್ಥಿಯ ಜೀವ ತೆಗೆಯಿತು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
