ಬೆಂಗಳೂರು:ಕರ್ನಾಟಕದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾರಿ ಪೈಪೋಟಿಯಲ್ಲಿ ಇರುವ ಮಧ್ಯೆ ಇದೀಗ ಆ ಸ್ಥಾನಕ್ಕೆ ಇನ್ನೊಬ್ಬರು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ಸಿಎಂ ಆಯ್ಕೆ ವಿಚಾರ ಈಗಾಗಲೇ ಹೈಕಮಾಂಡ್​ಗೆ ತಲುಪಿದ್ದು, ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ಪ್ರತ್ಯೇಕವಾಗಿ ಭೇಟಿ ಮಾಡಿ ಭಾರಿ ಮಾತುಕತೆ ನಡೆಸಿದ್ದಾರೆ. ಅದಾಗ್ಯೂ ಇದುವರೆಗೂ ಸಿಎಂ ಸ್ಥಾನದ ಕುರಿತು ಅಂತಿಮ ನಿರ್ಧಾರ ಹೊರಹೊಮ್ಮಿಲ್ಲ.
ಇದನ್ನೂ ಓದಿ:ಪ್ರಯಾಣಿಸುತ್ತಿದ್ದಾಕೆಗೆ ಬಸ್​ನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್​
ಈ ನಡುವೆ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಕೂಡ ಸಿಎಂ ಸ್ಥಾನದ ಕುರಿತು ತಮಗೂ ಆಸೆ ಇದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್​ ಹೈಕಮಾಂಡ್ ತನಗೇನಾದರೂ ಸಿಎಂ ಸ್ಥಾನ ನೀಡಿದರೆ ಅದನ್ನು ಯಶಸ್ವಿಯಾಗಿ ನಿಭಾಯಿಸುವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ನನ್ನ ಹಾಗೂ ನನ್ನ ಕಾರ್ಯವೈಖರಿ ಕುರಿತು ಕಾಂಗ್ರೆಸ್​ ಹೈಕಮಾಂಡ್​ನವರಿಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಿರುವ ಪರಮೇಶ್ವರ್, ತನ್ನನ್ನು ಸಿಎಂ ಮಾಡಿದರೆ ತಾನು ಸಿದ್ಧ ಎಂಬ ಅನಿಸಿಕೆಯನ್ನು ಬಹಿರಂಗಪಡಿಸಿದ್ದಾರೆ. ಆದರೆ ಸಿಎಂ ಸ್ಥಾನಕ್ಕಾಗಿ ನಾನು ಲಾಬಿ ನಡೆಸುವುದಿಲ್ಲ ಎಂಬುದನ್ನೂ ಅವರು ಹೇಳಿದ್ದಾರೆ.
ಹವಾಲಾ ಮಾದರಿಯಲ್ಲಿ ಚುನಾವಣೆಗೆ ಹಣ ಹಂಚಿಕೆ, ಇಬ್ಬರ ಮೇಲೆ ಎಫ್​ಐಆರ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 14 =
Remember me
