ಹಾಸನ:ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಒಂದರ ಹಿಂದೊಂದರಂತೆ ಎರಡು ದೊಡ್ಡ ಸ್ಫೋಟ ಪ್ರಕರಣಗಳು ನಡೆದಿದ್ದು, ಭಾರಿ-ನೋವೇ ಸಂಭವಿಸಿದೆ. ಇದೀಗ ಮತ್ತೊಂದು ಬ್ಲಾಸ್ಟ್​ ಆಗಿದ್ದು, ಸ್ಫೋಟಕ ಸಾಮಗ್ರಿ ಸಿಡಿದು ಇಬ್ಬರು ಸಾವಿಗೀಡಾಗಿದ್ದರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆಯಲ್ಲಿನ ಗೋದಾಮಿನಲ್ಲಿ ಸಂಗ್ರಹಿಸಿಟಿದ್ದ ಸ್ಫೋಟಕ ಸಾಮಗ್ರಿಯನ್ನು ಸಾಗಿಸುವಾಗ ಅದು ಸಿಡಿದು ಅನಾಹುತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸಂಪತ್​ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದರೆ, ನಟರಾಜ್​ ಎಂಬಾತ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇನ್ನೊಬ್ಬ ಕಾರ್ಮಿಕ ರವಿಕುಮಾರ್​​ಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತಪಟ್ಟಿರುವ ಇಬ್ಬರೂ ಹೊಳೆನರಸೀಪುರದ ಬೆಟ್ಟದಹಳ್ಳಿಯವರು ಎಂಬುದು ತಿಳಿದು ಬಂದಿದೆ.
ಇದನ್ನೂ ಓದಿ:ಶಿವಮೊಗ್ಗ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ: ಚಿಕ್ಕಬಳ್ಳಾಪುರದಲ್ಲಿ ಗಣಿಸ್ಫೋಟಕ್ಕೆ ಐವರು ಬಲಿ
ಈ ಗೋದಾಮಿಗೆ ಲೈಸೆನ್ಸ್ ಇದ್ದು, ನಾಗೇಶ್​ ಎಂಬವರ ಮಾಲೀಕತ್ವದಲ್ಲಿದೆ ಎಂಬುದು ತಿಳಿದು ಬಂದಿದೆ. ಸ್ಫೋಟ ಸಂಭವಿಸಲು ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.
ಇದನ್ನೂ ಓದಿ:ಸ್ಫೋಟಕಗಳ ಜತೆ ಹುಡುಗಾಟ; ಎಚ್ಚೆತ್ತುಕೊಳ್ಳದ ಸರ್ಕಾರ, ಶಿವಮೊಗ್ಗ ಬಳಿಕ ಚಿಕ್ಕಬಳ್ಳಾಪುರದಲ್ಲೂ ದುರಂತ..
ಸಾರಾಯಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಕೆಲವು ಮದ್ಯಪ್ರಿಯರಿಗೆ ಖುಷಿಯೋ ಖುಷಿ!

ಜಿಮ್​ ತೆರೆಯಲು ಒಪ್ಪಿಗೆ ನೀಡಿದ ಸರ್ಕಾರ; ಆದ್ರೆ ಷರತ್ತುಗಳ ಪಾಲನೆ ಕಡ್ಡಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
