ಚಾಮರಾಜನಗರ:ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯಲ್ಲಿ ಶುಕ್ರವಾರ ಬಂಡೆ ಕುಸಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಸಾವಿಗೀಡಾಗಿದ್ದು, ಇದುವರೆಗೆ ಇಬ್ಬರ ಶವ ಹೊರತೆಗೆದಂತಾಗಿದೆ.
ಬೊಮ್ಮಲಾಪುರ ಗ್ರಾಮದ ಮಹೇಂದ್ರಪ್ಪ ಎಂಬುವವರ ಜಾಗದಲ್ಲಿ ಕೇರಳ ಮೂಲದ ಉದ್ಯಮಿ ಹಕೀಮ್​ ಎಂಬಾತ ಗುತ್ತಿಗೆ ಪಡೆದು ಬಿಳಿಕಲ್ಲು ಗಣಿಗಾರಿಕೆ ನಡೆಸುತ್ತಿದ್ದು, ಗಣಿಗಾರಿಕೆ ವೇಳೆ ಬಂಡೆಯೊಂದು ಜೆಸಿಬಿ ಮತ್ತು ಟಿಪ್ಪರ್​ ಮೇಲೆ ಬಿದ್ದು ದುರಂತ ಸಂಭವಿಸಿದೆ ಎನ್ನಲಾಗಿದೆ.
ಬಂಡೆಯಡಿ ಸಿಲುಕಿಕೊಂಡವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ಅಜಿಮುಲ್ಲಾ ಎಂಬಾತನ ಶವ ಹೊರತೆಗೆಯಲಾಗಿತ್ತು. ಮುಂದುವರಿದ ಕಾರ್ಯಾಚರಣೆಯಲ್ಲಿ ಇಂದು ಮಿರಾಜ್ ಎಂಬ ಇನ್ನೊಬ್ಬನ ಶವ ಹೊರ ತೆಗೆಯಲಾಗಿದೆ. ಒಟ್ಟು ಮೂವರು ಬಂಡೆಯಡಿ ಸಿಲುಕಿದ್ದರು ಎನ್ನಲಾಗಿದ್ದು, ಮತ್ತೊಬ್ಬನಿಗಾಗಿ ಶೋಧ ನಡೆಯುತ್ತಿದೆ.
52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..

ಫರ್ನಿಚರ್​ ಮೇಳಕ್ಕೆ ಇಂದು ಕೂಡ ಭರ್ಜರಿ ಸ್ಪಂದನೆ; ಅತ್ಯಾಧುನಿಕ ಉಪಕರಣಗಳ ಖರೀದಿಗೆ ಮುಗಿಬಿದ್ದ ಜನರು..

ಒಂದು ಭೀಕರ ಸ್ಫೋಟ, ವಾರ ಕಳೆಯುವಷ್ಟರಲ್ಲಿ 14 ಸಾವು; ಸೀಮಂತದ ಬೆನ್ನಿಗೇ ಭಾರಿ ಸೂತಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 6 =
Remember me
