ಮಂಗಳೂರು:ಶಾಲೆಯಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕು ಎಂಬ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಕರಾವಳಿಯ ಕಾಲೇಜಿನಲ್ಲಿ ವಿವಾದ ಆರಂಭಗೊಂಡಿತ್ತು. ಇದೀಗ ಫೋಟೋವೊಂದನ್ನು ಅಳವಡಿಸಿದ್ದು ಕೂಡ ವಿವಾದಾತ್ಮಕ ಎನಿಸಿಕೊಂಡಿದೆ.
ಮಂಗಳೂರಿನ ಹಂಪನಕಟ್ಟೆ ಬಳಿ ಇರುವ ವಿವಿ ಘಟಕದ ಕಾಲೇಜಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಅಳವಡಿಸಿದ್ದಕ್ಕೆ ವಿವಾದ ಉಂಟಾಗಿದೆ. ಕಾಲೇಜಿನ ತರಗತಿಯೊಂದರಲ್ಲಿ ಸಾವರ್ಕರ್ ಫೋಟೋ ಅಳವಡಿಸಲಾಗಿತ್ತು.
ಹೀಗೆ ತರಗತಿಯಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದನ್ನು ಕಾಲೇಜಿನ ಇತರ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದ ಬಳಿಕ ತೆರವು ಮಾಡಲಾಗಿದೆ. ಆದರೆ ಅಷ್ಟರಲ್ಲಾಗಲೇ ಈ ವಿಷಯ ವೈರಲ್ ಆಗಿತ್ತು. ಕಾಮರ್ಸ್ ವಿಭಾಗದ ಕೆಲವು ವಿದ್ಯಾರ್ಥಿಗಳು ಈ ಕೆಲಸ ಮಾಡಿದ್ದರು. ಸದ್ಯ ವಿದ್ಯಾರ್ಥಿಗಳ ಬಳಿ ಪ್ರಾಂಶುಪಾಲರು ತಪ್ಪೊಪ್ಪಿಗೆ ಬರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಹಿರಿಯ ನಾಗರಿಕರಿಗೊಂದು ಸಂತಸದ ಸಂಗತಿ; ಮತ್ತೊಮ್ಮೆ ಆದೇಶ ಹೊರಡಿಸಿತು ಸರ್ಕಾರ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
