ಬೆಂಗಳೂರು:ಥಣಿಸಂದ್ರ ರೈಲ್ವೆ ಮೇಲ್ಸೇತುವೆ ಬಳಿ ಬಿಬಿಎಂಪಿ ಕಸದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ವಿಗ್ಗಿ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಯಾದಗಿರಿಯ ಸುರಪುರ ಮೂಲದ ದೇವಣ್ಣ (25) ಮೃತಪಟ್ಟವ. ಬಿಬಿಎಂಪಿ ಕಸದ ಲಾರಿ ಚಾಲಕ ದಾವಣಗೆರೆ ಮೂಲದ ದಿನೇಶ್ ನಾಯ್ಕ (40) ಬಂಧಿತ.
ನಗರದಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುವ ದೇವಣ್ಣ, ಶನಿವಾರ ಸಂಜೆ ನಾಗವಾರದಿಂದ ಹೆಗ್ಗಡೆ ನಗರದ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ. ಅದೇ ರಸ್ತೆಯಲ್ಲಿ ಬಂದ ಬಿಬಿಎಂಪಿ ಕಸದ ಲಾರಿ ಮಾರ್ಗಮಧ್ಯೆ ಥಣಿಸಂದ್ರ ರೈಲ್ವೆ ಮೇಲ್ಸೇತುವೆ ಬಳಿ ಹಿಂದಿನಿಂದ ದೇವಣ್ಣನ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ದೇವಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಜಾಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುತ್ತಿದೆದಾರ ವಿಶ್ವನಾಥ್ ಎಂಬುವವರಿಗೆ ಸೇರಿದ ಕಸದ ಲಾರಿ ಇದಾಗಿದೆ. ಒಂದೂವರೆ ವರ್ಷಗಳಿಂದ ಮಹಾದೇವಪುರ ವಾರ್ಡ್ ಕಸದ ಟೆಂಡರ್ ಪಡೆದು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಕಳೆದ ಎರಡು ತಿಂಗಳಲ್ಲಿ ಬಿಬಿಎಂಪಿ ಕಸದ ಲಾರಿಗೆ ನಾಲ್ವರು ಬಲಿಯಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 15 =
Remember me
