ಚಿಕ್ಕಮಗಳೂರು:ರಾಜ್ಯದಲ್ಲಿ ಇಂದು ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಮೂಲಕ ಅಪ್ಪನ ದಿನದಂದೇ ಇಬ್ಬರು ಅಪ್ಪ-ಮಗ ಅಪಘಾತದಲ್ಲಿ ಸಾವಿಗೀಡಾದಂತಾಗಿದೆ.
ಇಂದು ಬೆಳಗ್ಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ರಸ್ತೆಯ ಬಳಿ ಕಾರು-ಕ್ಯಾಂಟರ್​ ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಅಪ್ಪ-ಮಗ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು.
ಇದೀಗ ಚಿಕ್ಕಮಗಳೂರು ಬಳಿ ಸಂಭವಿಸಿದ ಮತ್ತೊಂದು ಭೀಕರ ಅಪಘಾತದಲ್ಲಿ ತಂದೆ-ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ರಾಜಾಜಿನಗರದ ನರಸಿಂಹರಾಜ್ (58), ಕಿರಣ್ (23) ಸಾವಿಗೀಡಾಗಿದ್ದಾರೆ. ಇವರು ಧರ್ಮಸ್ಥಳದಿಂದ ಬೆಂಗಳೂರಿಗೆ ಮರಳುವಾಗ ಅಪಘಾತ ಸಂಭವಿಸಿದೆ.
ಹಾಸನದ ಬಳಿ ಭೀಕರ ಅಪಘಾತ: ತಂದೆ- ಮಗ ಸಾವು- ಮೂವರ ಸ್ಥಿತಿ ಚಿಂತಾಜನಕ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × four =
Remember me
