ಕಲಬುರಗಿ:ರಾಜ್ಯದಲ್ಲಿ ವರ್ಷಾರಂಭದ ಮೊದಲ ದಿನವೇ ಅಪಘಾತದ ಮೇಲೆ ಅಪಘಾತ ಸಂಭವಿಸಿದ್ದು, ಇದೀಗ ಮೂರನೇ ಭೀಕರ ಅಪಘಾತವಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಂದೇ ದಿನದಲ್ಲಿ ಮೂರು ಭೀಕರ ಆ್ಯಕ್ಸಿಡೆಂಟ್​ ಸಂಭವಿಸಿದ್ದು, ಒಟ್ಟಿಗೆ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ಭಂಕೂರ್ ಗ್ರಾಮದ ಬಳಿ ಈ ಅಪಘಾತವಾಗಿದ್ದು, ಬೈಕ್​ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಇದರಲ್ಲಿ ಬೈಕ್​ ಸವಾರರಾದ ನಜೀರ್ ಸಾಬ್ (28) ಹಾಗೂ ಟೋಪಸಿಂಗ್ (26) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಬೈಕ್ ಸವಾರರು ಕಲಬುರಗಿಯಿಂದ ಶಹಬಾದ್ ಪಟ್ಟಣಕ್ಕೆ ತೆರಳುತ್ತಿದ್ದಾಗ ಅದೇ ದಾರಿಯಲ್ಲಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಸ್ಥಳಕ್ಕೆ ಶಹಬಾದ್ ಪೋಲಿಸರ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲಿಸಿದ್ದಾರೆ. ಲಾರಿ ಚಾಲಕನ ಪತ್ತೆಗೆ ಕ್ರಮಕೈಗೊಂಡಿದ್ದಾರೆ.
ನೀರಿನ ಟ್ಯಾಂಕ್​ಗೆ ಅಪ್ಪಳಿಸಿದ ಕಾರು, ಇಬ್ಬರು ಸ್ಥಳದಲ್ಲೇ ಸಾವು

ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
