ಬೆಂಗಳೂರು:ಸಂಪೂರ್ಣ ವಿಶ್ವವೇ ಭಯಭೀತವಾಗುವಂತೆ ಕಾಡಲಾರಂಭಿಸಿರುವ ಕರೊನಾ ವೈರಸ್​ ದೇಶ ಮತ್ತು ರಾಜ್ಯದಲ್ಲಿ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಪಂಚದಾದ್ಯಂತ ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿರುವ ಕರೊನ ವೈರಸ್​ ಇದೀಗ ಕರ್ನಾಟಕದ ಕೊಡಗಿನಲ್ಲಿಯೂ ಕಾಣಿಸಿಕೊಂಡಿದೆ.
ಸೌದಿ ಅರೇಬಿಯಾದಿಂದ ಪ್ರವಾಸ ಮುಗಿಸಿ ಕೊಡಗು ಜಿಲ್ಲೆಗೆ ಮರಳಿದ್ದ ವ್ಯಕ್ತಿಯೊಬ್ಬರಲ್ಲಿ ಕರೊನಾ ವೈರಸ್​ ಇರುವುದು ಧೃಡವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ವೈರಸ್​ ಸೋಂಕಿತರ ಸಂಖ್ಯೆ 14ರಿಂದ 15ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ. ಸದ್ಯ ಸೋಂಕು ಪತ್ತೆಯಾಗಿರುವ ವ್ಯಕ್ತಿಯನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದ್ದು ನಿಗಾ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕರೊನಾ ವೈರಸ್​ ತಡೆಗೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮಾರ್ಚ್​ 14ರಿಂದ ಕರ್ನಾಟಕದಲ್ಲಿ ಅರೆ ಬಂದ್​ ನಡೆಸಲು ಸರ್ಕಾರ ಆದೇಶಿಸಿದ್ದು, ಮಾಲ್​ ಥಿಯೇಟರ್​ ಸೇರಿದಂತೆ ಅನೇಕ ಸಾರ್ವಜನಿಕ ಸ್ಥಳಗಳನ್ನು ಮುಚ್ಚಲಾಗಿದೆ.
ಇಂದು ಕೊಡಗಿನಲ್ಲಿ ಮೊದಲ#COVID19ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ#COVID19ಪ್ರಕರಣವಾಗಿದೆ.
— B Sriramulu (@sriramulubjp)March 19, 2020

ಇಟಲಿಯಲ್ಲಿ ಕರೊನಾ ಅಟ್ಟಹಾಸ; ಒಂದೇ ದಿನದಲ್ಲಿ 475 ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − seven =
Remember me
