ಬೆಳಗಾವಿ:ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಳಗೊಂಡಿದ್ದು, ಇಂದು ಮತ್ತೊಬ್ಬ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯವೊಂದರಲ್ಲಿ ಈ ಪ್ರಕರಣ ನಡೆದಿದೆ.
ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೆಳಗಾವಿ ಜಿಲ್ಲೆಯ ‌ಬೈಲಹೊಂಗಲ ಪಟ್ಟಣದ ಇಂದಿರಾನಗರದಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಇತರ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ಈತ ನೇಣು ಬಿಗಿದುಕೊಂಡಿದ್ದ.
ಇದನ್ನೂ ಓದಿ:ಅಪಾರ್ಟ್​ಮೆಂಟ್ ಹತ್ತನೇ ಮಹಡಿಯಿಂದ ಹಾರಿದ ವಿದ್ಯಾರ್ಥಿ; ತಪ್ಪು ಮಾಡಿ ಸಿಕ್ಕಿಬಿದ್ದ ಮುಜುಗರ ಎದುರಿಸಲಾಗದೆ ಸಾವಿಗೆ ಶರಣು..
ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ‌ಪರೀಕ್ಷೆಗಾಗಿ ವಿದ್ಯಾರ್ಥಿ ಶವವನ್ನು ತಾಲೂಕಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಹೆಚ್ಚುತ್ತಿರುವ ಮಕ್ಕಳ ಆತ್ಮಹತ್ಯೆ!; ಓದಿನ ಒತ್ತಡ ತಾಳಲಾಗದೆ ನೇಣು ಹಾಕಿಕೊಂಡ ವಿದ್ಯಾರ್ಥಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 1 =
Remember me
