ಬೆಂಗಳೂರು:ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಮಾಡಿಕೊಂಡ ಸ್ನೇಹಿತರ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ಮಧ್ಯಪ್ರದೇಶ ಮೂಲದ ಇಬ್ಬರು ಯುವಕರು ಕೂಲಿ ಕೆಲಸ ಮಾಡಿಕೊಂಡು ರಾಜಾಜಿನಗರದ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಮೊಬೈಲ್ ಚಾರ್ಜ್ ಹಾಕಲು ಒಂದೇ ಸ್ವಿಚ್ ಬಳಕೆ ಮಾಡುತ್ತಿದ್ದರು. ಈ ವೇಳೆ ನಾನು ಹಾಕುತ್ತೇನೆ ಎಂದು ಇಬ್ಬರ ನಡುವೆ ವಾಗ್ವಾದ ನಡೆದು, ಆರೋಪಿ ಚಾರ್ಜ್​ ಮಾಡುತ್ತಾನೆ.
ಇದನ್ನೂ ಓದಿ:ಇಂದು ರಾತ್ರಿಯಿಂದ ಸ್ಟ್ರಿಕ್ಟ್​ ನೈಟ್​ ಕರ್ಫ್ಯೂ: ರಸ್ತೆಗಿಳಿಯೋ ಮುನ್ನ ಎಚ್ಚರ- ನಿಯಮಗಳೇನು?
ಇದಕ್ಕೆ ಮೃತ ಯುವಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಕುಪಿತಗೊಂಡ ಆರೋಪಿ, ಮೃತ ಯುವಕನಿಗೆ‌ ಸೌದೆಯಿಂದ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಈ ಸಂಬಂಧ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲೆಯೂ ಅಲ್ಲ, ಆತ್ಮಹತ್ಯೆಯೂ ಅಲ್ಲ: ರಾತ್ರಿ ಬೆಳಗಾಗುವುದರೊಳಗೆ ಆರು ಮಂದಿ ಸುಟ್ಟು ಕರಕಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
