ಬೆಂಗಳೂರು:ಮನುಷ್ಯ ಸ್ವಾರ್ಥವನ್ನು ಬಿಟ್ಟು ಸಮಾಜಕ್ಕೆ ಸಂತೋಷ ನೀಡುವ ಹಾಗೆ ನಡೆದುಕೊಳ್ಳಬೇಕು. ಎಲ್ಲರೂ ಅಂತಹ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ಪೇಜಾವರ ಶ್ರೀವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ
ಶ್ರೀಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಗುರು ಶ್ರೀವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾದ 81ನೇ ಅಧಿವೇಶನದ ಸಮಾರೋಪ ಮತ್ತು ಶ್ರೀವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಆಶೀರ್ವಚನ ನೀಡಿದರು.
ರಾಜ ಪ್ರಭುತ್ವ ಇದ್ದಾಗ ಮಹಾರಾಜರೇ ಪ್ರಜೆಗಳಿಗೆ ಸಂತೋಷವಾಗುವ ರೀತಿ ರಾಜ್ಯಭಾರ ಮಾಡುತ್ತ ಇದ್ದರು. ರಾಮ ಇದಕ್ಕೆ ಆದರ್ಶ ಪುರುಷ. ಆದರೆ ಇಂದು ಪ್ರಜಾ ಪ್ರಭುತ್ವ ಇದೆ. ಪ್ರಜೆಗಳು ಸಮಾಜಕ್ಕೆ ಹಿತವಾಗುವಂತೆ ನಡೆದುಕೊಳ್ಳಬೇಕು. ಇತರರಿಗೆ ನೆಮ್ಮದಿ, ಸಂಭ್ರಮ ನೀಡುವ ಉದಾತ್ತ ಮನೋಭಾವ ರೂಢಿಸಿಕೊಂಡರೆ ನಾಡು ಸುಭಿಕ್ಷವಾಗಿರುತ್ತದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಂಡಾರಕೇರಿ ಮಠದ ಶ್ರೀವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶ್ರೀವೇದವ್ಯಾಸ ಜಯಂತಿ ಅಂಗವಾಗಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲದ ದಾಮೋದರಾಚಾರ್ಯರು 1 ಲಕ್ಷ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ ಮತ್ತು ಬಸವನಗುಡಿ ಶ್ರೀಜಯತೀರ್ಥ ವಿದ್ಯಾಪೀಠದ ಪಂಡಿತ ಸತ್ಯಬೋಧಾಚಾರ್ಯ ಹೊನ್ನಾಳಿ ಅವರಿಗೆ ತಲಾ 50 ಸಾವಿರ ರೂ. ನಗದು ಪುರಸ್ಕಾರದೊಂದಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.
ವೇದವ್ಯಾಸ ಜಯಂತಿ ಅಂಗವಾಗಿ ಬೆಳಗ್ಗೆ ಹೋಮ, ವೇದ ಶಾಸ್ತ್ರ ವಿನೋದ, ವಸಂತ ಉತ್ಸವ, ಸಂಜೆ ಶ್ರೀವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ ನೆರವೇರಿತು.
ಪೇಜಾವರ ಶ್ರೀಗಳಿಗೆ ಸನ್ಮಾನ:ಅಯೋಧ್ಯೆ ಬಾಲ ರಾಮನನ್ನು ಮಂಡಲಪರ್ಯಂತ ವಿವಿಧ ಸೇವೆಗಳಿಂದ ಪೂಜಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಪೇಜಾವರ ಶ್ರೀಗಳ ಷಷ್ಟ್ಯಬ್ಧಿ ಮಹೋತ್ಸವದ ಅಂಗವಾಗಿ ‘ಶ್ರೀರಾಮ ಲಲನ ಲಾಲನ ಲಲಾಮ ತೀರ್ಥ’ ಎಂಬ ಬಿರುದು ನೀಡಿ ಸನ್ಮಾನಿಸಲಾಯಿತು.
ಪೇಜಾವರ ಮಠದ ಪಾಂಡುರಂಗ ವಿಠಲ ದೇವರಿಗೆ ನವರತ್ನ ಖಚಿತ ಭಂಗಾರದ ಸರ, 60 ಸಾವಿರ ಕಾಣಿಕೆ, 60 ವಿವಿಧ ಪೂಜಾ ಸಾಮಗ್ರಿಗಳನ್ನು ಸಮರ್ಪಿಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
