ಬೆಂಗಳೂರು:ಅಪರೇಷನ್ ಕಮಲಕ್ಕೆ ಬಿಜೆಪಿ ಒಂದು ಸಾವಿರ ಕೋಟಿ ರೂ. ಬಳಕೆ ಮಾಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ತಮ್ಮ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈಕಾಲು ಹಿಡಿದು ಸಾವಿರ ಕೋಟಿ ರೂ. ತಂದಿಟ್ಟುಕೊಂಡು ಅಪರೇಷನ್ ಕಮಲಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ರಾಜ್ಯ ನಾಯಕರು ಹೈಕಮಾಂಡ್ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಹಾಗಾಗಿ ಅಸ್ತಿತ್ವದಲ್ಲಿ ಇರಲು ಎಂದು ತಲೆ ಬುಡ ಇಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮನೆಯಲ್ಲಿ ನಡೆದ ಬೋಜನಕೂಟದಲ್ಲಿ ಮುದ್ದೆ ಬಗ್ಗೆ ಚರ್ಚೆಯಾಗಿದೆ, ಹುದ್ದೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಸಭೆಯಲ್ಲೇ ಇದ್ದವರು ಹೇಳುತ್ತಿದ್ದಾರೆ. ಆದರೆ ಬಿಜೆಪಿಯವರು ಕಲ್ಪನೆ ಮಾಡಿಕೊಂಡು ಮಾತನಾಡುತ್ತಿದ್ದಾರೆ. ಡೈನಿಂಗ್ ಟೆಬಲ್ನಲ್ಲಿ ನಡೆದಿದ್ದು ಬಿಜೆಪಿಯವರಿಗೆ ಹೇಗೆ ಗೊತ್ತು ಎಂದು ಪ್ರಶ್ನಿಸಿದರು.
ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಾಗ ರಾಜ್ಯದ ಒಬ್ಬ ಬಿಜೆಪಿ ನಾಯಕರು ಇರಲಿಲ್ಲ. ಕದ್ದು ಮುಚ್ಚಿ ಮೈತ್ರಿ ಮಾಡಿಕೊಳ್ಳುತ್ತಾರೆ. ಬಿಜೆಪಿಯವರು ಅವರದೇ ಪಕ್ಷದ ನಾಯಕ ಎಂ.ಪಿ.ರೇಣುಕಾಚಾರ್ಯ ಹೇಳುತ್ತಿರುವುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.ಆಪರೇಷನ್ ಕಮಲ ನಡೆಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಸಂಚು ನಡೆಸುತ್ತಿರುವುದು ಗುಟ್ಟೇನೂ ಅಲ್ಲ. ಎಲ್ಲಿ ಸ್ಪಷ್ಟ ಬಹುಮತ ಬರುವುದಿಲ್ಲವೋ ಅಲ್ಲೆಲ್ಲ ಆಪರೇಷನ್ ಕಮಲ ಮಾಡಿಲ್ಲವೆ? ಎಂದು ಕೇಳಿದರು.
ಬಿಜೆಪಿಗೆ ಬಹುಮತ ಬರದೇ ಇರುವ ಮಹಾರಾಷ್ಟ್ರ, ಬಿಹಾರ, ಅಸ್ಸಾಂ, ಮಧ್ಯ ಪ್ರದೇಶದಲ್ಲಿ ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿದ್ದರು. ರಾಜಸ್ಥಾನದಲ್ಲೂ ಪ್ರಯತ್ನ ಮಾಡಿದರು. ಕರ್ನಾಟಕದಲ್ಲೂ ಪ್ರಯತ್ನ ಮಾಡುತ್ತಿದ್ದಾರೆ. ಇದು ಬಿಜೆಪಿಯ ಸ್ಟಾಂಟರ್ಡ್ ಆಪರೇಷನ್ ಆಗಿದೆ ಎಂದು ವ್ಯಂಗ್ಯವಾಡಿದರು.
ಒಂದು ಸಾವಿರ ಕೋಟಿ ರೂಪಾಯಿ ಕೊಡಿ, ಸರ್ಕಾರ ರಚನೆ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈ ಕಾಲು ಬಿದ್ದಿದ್ದಾರೆ. ಅದೇ ದುಡ್ಡು ತಂದು ಇಲ್ಲಿ ಆಪರೇಷನ್ ಕಮಲ ಆಮಿಷಕ್ಕೆ ಬಳಕೆ ಮಾಡುತ್ತಿರಬಹುದು ಎಂದರು.ಆಪರೇಷನ್ ಕಮಲ ಮಾಡುವವರು ನನ್ನನ್ನಂತೂ ಸಂಪರ್ಕ ಮಾಡಿಲ್ಲ. ನಾವೆಲ್ಲ ಹುಟ್ಟ ಕಾಂಗ್ರೆಸಿಗರು. ನಮ್ಮ ಹತ್ತಿರ ಬರುವುದಿಲ್ಲ. ಆದರೆ ನಮ್ಮ ಪಕ್ಷದ ಒಬ್ಬ ಶಾಸಕರು ಹೇಳುತ್ತಾರೆ ಎಂದರೆ ನಂಬಬೇಕಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಎರಡವರೆ ವರ್ಷದ ಅಕಾರ ಹಂಚಿಕೆಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಣದೀಪ್‌ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಗೊತ್ತು. ಬೇರೆಲ್ಲವೂ ಕಾಲ್ಪನಿಕ ಎಂದು ಹೇಳಿದರು.
ಕೆಇಎ ನಡೆಸಿದ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ಬಂದಿದೆ. ಅದರ ಪ್ರಕಾರ ಕಲಬುರಗಿ ಗ್ರಾಮೀಣ ಪರೀಕ್ಷಾ ಕೇಂದ್ರದ ಒಳಗೆ ಅಕ್ರಮ ನಡೆದಿಲ್ಲ. ಆದರೂ ನಾವು ನಿಷ್ಪಕ್ಷಪಾತ, ಕಠಿಣ ತನಿಖೆಗೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 4 =
Remember me
