ಬೆಂಗಳೂರು:ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಕೆ.ಪಿ.ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಕೆ.ಪಿ.ಅಗ್ರಹಾರದ 5ನೇ ಕ್ರಾಸ್ ಹೇಮಂತ್ ಮೆಡಿಕಲ್ಸ್ ಮುಂಭಾಗ ತಡರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿರುವುದರಿಂದ ಮುಖ ಜಜ್ಜಿ ಹೋದ ಕಾರಣ ಆತನ ಗುರುತು ಪತ್ತೆಯಾಗಿಲ್ಲ. ಸುಮಾರು 30 ವರ್ಷದ ಯುವಕನಂತೆ ಕಾಣುತ್ತಿದ್ದಾನೆ. ಕೊಲೆಗೀಡಾದವನ ಹೆಸರು, ವಿಳಾಸ ಸದ್ಯಕ್ಕೆ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ಯುವಕ ಹಸಿರು ಬಣ್ಣದ ಟೀ ಶರ್ಟ್ ಮತ್ತು ನೈಟ್ ಪ್ಯಾಂಟ್ ಧರಿಸಿದ್ದಾನೆ. ಕೃತ್ಯದ ಹಿಂದೆ ಮೂವರು ಮಹಿಳೆಯರು ಹಾಗೂ ಮೂವರು ಪುರುಷರ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಥಳೀಯರು ನೀಡಿರುವ ಮಾಹಿತಿ ಪ್ರಕಾರ, ಮುಂಜಾನೆ ೧ ಗಂಟೆ ಸುಮಾರಿಗೆ ಯಾರೋ ಅಪರಿಚಿತ ವ್ಯಕ್ತಿ ಕೂಗಿಕೊಂಡರು, ಮನೆಯಿಂದ ಹೊರ ಬಂದು ನೋಡಿದಾಗ ಮೂವರು ಮಹಿಳೆಯರು, ಪುರುಷರು ಯುವಕನ ಜತೆ ಜಗಳ ಮಾಡುತ್ತಿರುವುದು ಕಂಡು ಬಂತು. ಅವರೇ ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಸಾಧ್ಯತೆಯಿದೆ ಎಂದು ಅಂದಾಜಿಸಿದ್ದಾರೆ.
ಜತೆಗೆ ನಗರದ ಎಲ್ಲ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಿ, ನಾಪತ್ತೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಪಡೆಯಲಾಗಿದೆ. ಸಮೀಪದ ಸಿಸಿ ಕ್ಯಾಮೆರಾ ಹಾಗೂ ಇತರೆ ತಾಂತ್ರಿಕ ಮಾಹಿತಿ ಸಂಗ್ರಹಿಸಲಾಗಿದೆ. ಈ ವೇಳೆ ಮೃತ ವ್ಯಕ್ತಿಯ ಫೋಟೋ ಪತ್ತೆಯಾಗಿದೆ. ಆದರೆ, ಆತನ ಹೆಸರು ತಿಳಿದುಬಂದಿಲ್ಲ. ಹೀಗಾಗಿ ಮೃತ ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶದಲ್ಲಿ ಟ್ರೆಂಡಿಂಗ್​ನಲ್ಲಿದೆ ‘ಹಾರ್ಟ್ ಅಟ್ಯಾಕ್’; ಅದರ ಬಗ್ಗೆಯೇ ಮಾತಾಡುತ್ತಿದ್ದಾರೆ ಹಲವರು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × three =
Remember me
