ಉಡುಪಿ:ಮೀನು ತರಲೆಂದು ರಸ್ತೆಗಿಳಿದ ಆತ ಮರಳಿ ಬಾರದ ಲೋಕಕ್ಕೆ ಹೋಗಿಬಿಟ್ಟಿದ್ದಾನೆ. ರಸ್ತೆ ದಾಟುವ ಮುನ್ನವೇ ಯಮಸ್ವರೂಪಿಯಾಗಿ ಬಂದಂಥ ಟೆಂಪೊ ಟ್ರಾವೆಲರೊಂದು ರಸ್ತೆ ಮಧ್ಯೆಯೇ ಆತನ ಪ್ರಾಣಪಕ್ಷಿಯನ್ನು ಹಾರಿಸಿಕೊಂಡು ಹೋಗಿದೆ.
ಹೀಗೆ ದುರಂತ ಸಾವಿಗೀಡಾದ ವ್ಯಕ್ತಿ ಭಟ್ಕಳ ಜಾಲಿ ನಿವಾಸಿ ಮಂಜು (46). ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ರಾಹುತನಕಟ್ಟೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್​ನಲ್ಲಿ ಸಾಗುತ್ತಿದ್ದ ಮಂಜು ಮಾರ್ಗಮಧ್ಯೆ ಬೈಕ್ ನಿಲ್ಲಿಸಿ ಮೀನು ತರಲೆಂದು ಹೋಗಿದ್ದೇ ಪ್ರಾಣಕ್ಕೆ ಸಂಚಕಾರ ತಂದಿದೆ.
ಇದನ್ನೂ ಓದಿ:ನಾನು ಟೈಟಾಗಿದ್ದೇನೆ ಗೊತ್ತಾಗಿಲ್ಲ, ಇನ್ನೊಂದು ಕಾರ್ಡ್ ನಂಬರ್ ಕೊಡಿ ಎಂದ; 730 ರೂಪಾಯಿ ವೈನ್‌ಗೆ 1.79 ಲಕ್ಷ ರೂ. ಧೋಖಾ
ರಾಹುತನಕಟ್ಟೆ ಬಳಿ ಮೀನು ತರಲಿಕ್ಕೆಂದು ಮಂಜು ರಸ್ತೆ ದಾಟುತ್ತಿದ್ದಾಗ ಧರ್ಮಸ್ಥಳದಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದಿದೆ. ಅದು ಡಿಕ್ಕಿ ಹೊಡೆದ ರಭಸಕ್ಕೆ ಮಂಜು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕನ್​ ಫ್ರೈ ಸರಿಯಾಗಿ ಮಾಡಿಲ್ಲವೆಂಬ ಸಿಟ್ಟಿನಿಂದ ಹೆಂಡತಿಯನ್ನು ಕೊಂದು ಮೂಟೆ ಕಟ್ಟಿ ಕೆರೆಗೆಸೆದ!

ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + four =
Remember me
