ಬೆಂಗಳೂರು:ರಾಜಧಾನಿಯ ಜಯನಗರದ ಶಾಪಿಂಗ್ ಕಾಂಪ್ಲೆಕ್ಸ್​ ಮುಂಭಾಗ ಬಾಲಕಿಯ ಮೈಮುಟ್ಟಿ ದೌರ್ಜನ್ಯ ಎಸಗಿದ್ದ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ, 5 ಸಾವಿರ ರೂ. ದಂಡ ವಿಧಿಸಿ ತ್ವರಿತ ನ್ಯಾಯಾಲಯ ತೀರ್ಪು ನೀಡಿದೆ.
ಉತ್ತರಹಳ್ಳಿಯ ಚಿಕ್ಕಲ್ಲಸಂದ್ರ ನಿವಾಸಿ ಟಿ. ಕಾಂತರಾಜ್ ಶಿಕ್ಷಾ ಅಪರಾಧಿ. ಬೀದಿಕಾಮಣ್ಣ ಆಗಿದ್ದ ಕಾಂತರಾಜ್, ಕೆಲಸಕ್ಕೆ ಹೋಗದೆ ಜನಸಂದಣಿ ಪ್ರದೇಶದಲ್ಲಿ ಬಾಲಕಿ ಮತ್ತು ಯುವತಿಯರಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. 2019ರ ಆಗಸ್ಟ್ 14ರಂದು ಜಯನಗರ 4ನೇ ಬ್ಲಾಕ್ ವಾಟರ್ ಟ್ಯಾಂಕ್ ಬಳಿಯ ಪಾದಚಾರಿ ಮಾರ್ಗದಲ್ಲಿ ನಿಂತಿದ್ದ. ಇದೇ ವೇಳೆ ಸಂತ್ರಸ್ತ ಬಾಲಕಿ ತನ್ನ ತಾಯಿ ಜತೆಗೆ ನಡೆದುಕೊಂಡು ಹೋಗುತ್ತಿದ್ದರು. ಅಲ್ಲೇ ನಿಂತಿದ್ದ ಕಾಂತರಾಜ್, ಎದುರಿಗೆ ಬಂದ ಬಾಲಕಿಯ ಮೈಗೆ ಮೈ ತಾಗಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ.
ತಕ್ಷಣ ಎಚ್ಚೆತ್ತ ಬಾಲಕಿ, ತಾಯಿ ಪ್ರಶ್ನೆ ಮಾಡಿದ್ದರು. ಅಲ್ಲೇ ಇದ್ದ ಸಾರ್ವಜನಿಕರು ಕಾಂತರಾಜ್‌ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ನಮ್ಮ-100ಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಹೊಯ್ಸಳ ಸಿಬ್ಬಂದಿ, ಕಾಂತರಾಜ್‌ನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಜಯನಗರ ಪೊಲೀಸರು, ವಿಚಾರಣೆ ನಡೆಸಿ ಕಾಂತರಾಜ್ ವಿರುದ್ಧ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು.
ಸರ್ಕಾರಿ ಅಭಿಯೋಜಕಿ ಪಿ. ಕೃಷ್ಣವೇಣಿ, ಸಂತ್ರಸ್ತೆ ಪರ ವಾದ ಮಂಡಿಸಿದ್ದರು. ನ್ಯಾ.ಕೆ.ಎನ್. ರೂಪಾ ಅವರು, ವಾದ-ಪ್ರತಿವಾದ ಆಲಿಸಿ ಕಾಂತರಾಜ್ ಅಪರಾಧಿ ಎಂದು ಘೋಷಣೆ ಮಾಡಿದರು. ಮೂರು ವರ್ಷ ಜೈಲು ಶಿಕ್ಷೆ, 5 ಸಾವಿರ ರೂ. ದಂಡ ಮತ್ತು ನೊಂದ ಬಾಲಕಿಗೆ 25 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದರು.
ವಿಷ್ಣುವರ್ಧನ್​ ಜನ್ಮದಿನಂದು ‘ಯಜಮಾನೋತ್ಸವ’; ನಡೆಯಲಿದೆ ದಾಖಲೆಯ ಕಟೌಟ್​​ ಜಾತ್ರೆ..

ಲೋಕಾಯುಕ್ತ ದಾಳಿ: 4 ಲಕ್ಷ ರೂ. ಸಮೇತ ಸಿಕ್ಕಿಬಿದ್ದ ಜಂಟಿ ಆಯುಕ್ತರ ಆಪ್ತ ಸಹಾಯಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
