ಉಡುಪಿ:ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ ಹಾಗೂ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರ ತಲೆ ಕಡಿದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಕರೆ ನೀಡಿದ್ದವನನ್ನು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.
ಮಹಮ್ಮದ್ ಶಫಿ ಬಂಧಿತ ಆರೋಪಿ. ಈತ ಮಾರಿಗುಡಿ ಎಂಬ ಇನ್​ಸ್ಟಾಗ್ರಾಂ ಖಾತೆ ಮೂಲಕ ಇಂಥದ್ದೊಂದು ಪ್ರಚೋದಕ ಹೇಳಿಕೆ ನೀಡಿದ್ದ. ‘ಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ ಹೀಗಂತ ಬರೆದುಕೊಂಡಿದ್ದಲ್ಲದೆ, 100% ಈ ಎರಡು ತಲೆ ಉರುಳೋದು ಖಚಿತ ಎಂದು ಪೋಸ್ಟ್ ಮಾಡಲಾಗಿತ್ತು.
ಐಪಿ ವಿಳಾಸದ ಮೂಲಕ ಮಂಗಳೂರಿನ ಸುರತ್ಕಲ್​ನಲ್ಲಿ ಆರೋಪಿಯನ್ನು ಬಂಧಿಸಿರುವ ಕಾಪು ಪೊಲೀಸರು ಈತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಂಗಳೂರಿನ ಬಜ್ಪೆ ನಿವಾಸಿಯಾಗಿರುವ ಈತ ಸುರತ್ಕಲ್ ಭಾಗದಲ್ಲಿ ಲಾಜಿಸ್ಟಿಕ್​ನಲ್ಲಿ ಕೆಲಸ ಮಾಡುತ್ತಿದ್ದ. ಲಾರಿಗಳ ಸೂಪರ್​ವೈಸರ್ ಆಗಿರುವ ಮಹಮ್ಮದ್ ಶಫಿ, ಕಾಂಗ್ರೆಸ್​ ಕಾರ್ಯಕರ್ತನಾಗಿಯೂ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ.
ಮಳಲಿ ವಿಚಾರದಲ್ಲಿ ಯಶಪಾಲ್​ ಸುವರ್ಣ ಅವರನ್ನು ಟಾರ್ಗೆಟ್ ಮಾಡಿರುವುದಾಗಿ ಈತ ಒಪ್ಪಿಕೊಂಡಿದ್ದು, ಇವನೊಂದಿಗೆ ಕೈಜೋಡಿಸಿರುವ ಮಹಮ್ಮದ್ ಆಸಿಫ್​ಗಾಗಿ ಪೊಲೀಸರು ಬಲೆಬೀಸಿದ್ದಾರೆ. ಎರಡನೇ ಆರೋಪಿ ಮಹಮ್ಮದ್ ಆಸಿಫ್ ಅಲಿಯಾಸ್ ಆಶಿಕ್ ದುಬೈನಲ್ಲಿ ನೆಲೆಸಿದ್ದಾನೆ. ಮಹಮ್ಮದ್ ಶಫಿ ಬಂಧನದ ಬಳಿಕ ಇನ್​ಸ್ಟಾಗ್ರಾಮ್​ನಲ್ಲಿರುವ ಮಾರಿಗುಡಿ ಅಕೌಂಟ್​​ನಲ್ಲಿರುವ ಎಲ್ಲ ಪೋಸ್ಟ್ ಡಿಲೀಟ್ ಆಗಿದೆ ಎಂದು ಎಎಸ್​ಪಿ ಎಸ್​.ಟಿ. ಸಿದ್ದಲಿಂಗಪ್ಪ ಮಾಹಿತಿ ನೀಡಿದ್ದಾರೆ.
ದೀರ್ಘ ಕಾಲ ಗೈರಾಗಿದ್ದ ತಂದೆ ಕೆಲಸದಿಂದ ವಜಾ, ‘ಅಪ್ಪನಿಗೆ ಕೆಲ್ಸ ಕೊಡಿ’ ಎಂಬ ಪುತ್ರಿಯ ಕೋರಿಕೆಗೆ ಮರುಗಿ ಉದ್ಯೋಗ ಕೊಟ್ಟ ಅಧಿಕಾರಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 8 =
Remember me
